ಬೆಂಗಳೂರು, ಆ.7: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ ಮತ್ತೊಮ್ಮೆ ಪರಿಷ್ಕರಿಸಿದೆ.
ಆಯೋಗದ 07 ಆಗಸ್ಟ್ 2026ರ ಆದೇಶದ ಪ್ರಕಾರ, ಬೂತ್ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಭೇಟಿ ಕಾರ್ಯವನ್ನು ಆಗಸ್ಟ್ 17, 2026ರವರೆಗೆ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ ಮುಂದಿನ ಎಲ್ಲಾ ಹಂತಗಳ ದಿನಾಂಕಗಳಲ್ಲೂ ಬದಲಾವಣೆ ಮಾಡಲಾಗಿದೆ.
ಪರಿಷ್ಕೃತ ವೇಳಾಪಟ್ಟಿಯಂತೆ ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 24ರಂದು ಪ್ರಕಟಿಸಲಾಗುವುದು. ನಂತರ ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಲ್ಲಿಕೆಯಾಗುವ ಅರ್ಜಿಗಳ ವಿಚಾರಣೆ ಹಾಗೂ ವಿಲೇವಾರಿ ಅಕ್ಟೋಬರ್ 22ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27, 2026ರಂದು ಪ್ರಕಟಿಸಲಾಗುತ್ತದೆ.
ಚುನಾವಣಾ ಆಯೋಗವು ಈ ಪರಿಷ್ಕೃತ ವೇಳಾಪಟ್ಟಿಯನ್ನು ಸಂಬಂಧಿತ ಎಲ್ಲಾ ಅಧಿಕಾರಿಗಳಿಗೆ ತಕ್ಷಣವೇ ತಿಳಿಸುವಂತೆ ಸೂಚಿಸಿದ್ದು, ಎಲ್ಲಾ ಲಭ್ಯ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ವ್ಯಾಪಕವಾಗಿ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದೆ. ಜೊತೆಗೆ, ರಾಜಕೀಯ ಪಕ್ಷಗಳಿಗೂ ಪರಿಷ್ಕೃತ ವೇಳಾಪಟ್ಟಿಯನ್ನು ಲಿಖಿತ ರೂಪದಲ್ಲಿ ತಿಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪರಿಷ್ಕೃತ ವೇಳಾಪಟ್ಟಿ
BLOಗಳ ಮನೆ-ಮನೆ ಭೇಟಿ: 30 ಜೂನ್ – 17 ಆಗಸ್ಟ್ 2026
ಮತಗಟ್ಟೆಗಳ ಮರುಹೊಂದಿಕೆ: 17 ಆಗಸ್ಟ್ 2026
ಕರಡು ಮತದಾರರ ಪಟ್ಟಿ ಪ್ರಕಟಣೆ: 24 ಆಗಸ್ಟ್ 2026
ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆ: 24 ಆಗಸ್ಟ್ – 23 ಸೆಪ್ಟೆಂಬರ್ 2026
ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ: 24 ಆಗಸ್ಟ್ – 22 ಅಕ್ಟೋಬರ್ 2026
ಅಂತಿಮ ಮತದಾರರ ಪಟ್ಟಿ ಪ್ರಕಟಣೆ: 27 ಅಕ್ಟೋಬರ್ 2026 ಈ ರೀತಿಯಾಗಿ ಚುನಾವಣಾ ಆಯೋಗ ದಿನಾಂಕ ವನ್ನು ಪರಿಷ್ಕರಿಸಿದೆ.




m
