ಇತರೆ

ಸುಳ್ಯದಲ್ಲಿ ವಿಶ್ವ ಆನೆ ದಿನಾಚರಣೆ: ಮಾನವ–ಪ್ರಾಣಿ ಸಂಘರ್ಷ ತಡೆಗೆ ಸಂವಾದ

ಕಾರ್ಯಕ್ರಮದಲ್ಲಿ ಅರಣ್ಯ ಸಂರಕ್ಷಣೆ, ವನ್ಯಜೀವಿಗಳ ರಕ್ಷಣೆ ಹಾಗೂ ಮಾನವ–ಆನೆ ಸಂಘರ್ಷದಂತಹ ಪ್ರಮುಖ ವಿಚಾರಗಳ ಕುರಿತು ಜಾಗೃತಿ ಮೂಡಿಸಲಾಯಿತು.

ಸುಳ್ಯ: ಸುಳ್ಯ ಅರಣ್ಯ ಉಪವಿಭಾಗ ಹಾಗೂ ಸುಬ್ರಹ್ಮಣ್ಯ ಅರಣ್ಯ ಉಪವಿಭಾಗದ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಸುಳ್ಯದ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಇದರ ಜೊತೆಗೆ ಆನೆಗಳ ಕುರಿತು ಮಾಹಿತಿ ಕಾರ್ಯಕ್ರಮ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ (DFO), ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ (SUDA) ಅಧ್ಯಕ್ಷ ಕೆ. ಎಂ. ಮುಸ್ತಫ, ಕೆವಿಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಡಾ. ಡಿ. ವಿ. ಲೀಲಾಧರ್ ಭಾಗವಹಿಸಿದ್ದರು.
ವೇದಿಕೆಯಲ್ಲಿ ಡಾ. ಅವಿನಾಶ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಪ್ರಶಾಂತ್ ಪೈ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅರಣ್ಯ ಸಂರಕ್ಷಣೆ, ವನ್ಯಜೀವಿಗಳ ರಕ್ಷಣೆ ಹಾಗೂ ಮಾನವ–ಆನೆ ಸಂಘರ್ಷದಂತಹ ಪ್ರಮುಖ ವಿಚಾರಗಳ ಕುರಿತು ಜಾಗೃತಿ ಮೂಡಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಿದವರಿಗೆ ಬಹುಮಾನ ಹಾಗೂ ಗಣ್ಯರಿಗೆ ಸನ್ಮಾನ ನೆರವೇರಿಸುವ ಮೂಲಕ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.
m