ಇತರೆ

ಸುಳ್ಯಕ್ಕೆ ಅಲ್ಪಸಂಖ್ಯಾತರ ವಸತಿ ನಿಲಯ ಮಂಜೂರು ಮಾಡುವಂತೆ ಸಚಿವ ಯು.ಟಿ. ಖಾದರ್‌ಗೆ ಮನವಿ

ಸುಳ್ಯ: ಶಿಕ್ಷಣ ಕಾಶಿ ಎಂದು ಹೆಸರಾಗಿರುವ ಸುಳ್ಯ ತಾಲೂಕು ಗ್ರಾಮೀಣ ಪ್ರದೇಶವಾಗಿದ್ದರೂ, ಕೇರಳ ರಾಜ್ಯ ಹಾಗೂ ಕೊಡಗು ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ಪ್ರಮುಖ ತಾಲೂಕು ಕೇಂದ್ರವಾಗಿದೆ. ಕೆ.ಜಿ.ಯಿಂದ ಪಿಜಿವರೆಗೆ ವಿವಿಧ ಶೈಕ್ಷಣಿಕ ಸಂಸ್ಥೆಗಳಿದ್ದು, ಇಂಜಿನಿಯರಿಂಗ್, ನರ್ಸಿಂಗ್, ಮೆಡಿಕಲ್, ಡೆಂಟಲ್, ಪಾಲಿಟೆಕ್ನಿಕ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳು ಇಲ್ಲಿ ಲಭ್ಯವಿವೆ.

ಆದರೆ, ಸುಳ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ವಸತಿ ನಿಲಯ ಸೌಲಭ್ಯಗಳ ಕೊರತೆ ಇರುವ ಹಿನ್ನೆಲೆಯಲ್ಲಿ, ಸುಳ್ಯ ತಾಲೂಕು ಕೇಂದ್ರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ವಸತಿ ನಿಲಯ ಮಂಜೂರು ಮಾಡುವಂತೆ ಸೂಡ ಅಧ್ಯಕ್ಷ ಕೆ.ಎಂ. ಮುಸ್ತಫ ಅವರು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಯು.ಟಿ. ಖಾದರ್ ಅವರಿಗೆ ಮನವಿ ಸಲ್ಲಿಸಿದರು.

ಸಚಿವರು ಇತ್ತೀಚೆಗೆ ಸುಳ್ಯಕ್ಕೆ ಪ್ರಗತಿ ಪರಿಶೀಲನೆಗಾಗಿ ಆಗಮಿಸಿದ್ದ ಸಂದರ್ಭದಲ್ಲಿ ಈ ಕುರಿತು ಅವರ ಗಮನ ಸೆಳೆಯಲಾಗಿದ್ದು, ಆಗ ಸಚಿವರು ಸಹಮತ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಕೇಂದ್ರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯ ಮಂಜೂರು ಮಾಡಲು ಅಗತ್ಯ ಆದೇಶ ನೀಡುವಂತೆ ಮನವಿಯಲ್ಲಿ ವಿನಂತಿಸಲಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಶವಾದ್ ಸುಳ್ಯ ಹಾಗೂ ಸುಳ್ಯ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದ ಕೆ. ಕಮಾಲ್ ಕಡಬ ಉಪಸ್ಥಿತರಿದ್ದರು.

m