ಸುಳ್ಯ, ಆ.18: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ಘಟಕದ ವತಿಯಿಂದ ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ–ಮಾಲಕರ ಸಂಘಕ್ಕೆ ಅತ್ಯವಶ್ಯಕವಾದ ಮಾಸ್ಕ್ ಹಾಗೂ ಗ್ಲೌಸ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ಆಂಬುಲೆನ್ಸ್ ಸೇವೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುವ ಚಾಲಕರು ಹಾಗೂ ಸಿಬ್ಬಂದಿಯ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಈ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಸುಧಾಕರ್ ರೈ, ಮಾಧ್ಯಮ ಮಿತ್ರ ಹಸೈನಾರ್ ಜಯನಗರ, ಸುಳ್ಯ ತಾಲೂಕು ಆಂಬುಲೆನ್ಸ್ ಚಾಲಕ–ಮಾಲಕರ ಸಂಘದ ಉಪಾಧ್ಯಕ್ಷ ರಫೀಕ್ ಬಿ.ಎಂ., ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಗೂನಡ್ಕ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.





m
