ಇತರೆ

ಸುಳ್ಯಕ್ಕೆ ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭೇಟಿ : ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಅವರಿಂದ ಸ್ವಾಗತ

ಸುಳ್ಯ: ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ತೆರಳುವ ಮಾರ್ಗಮಧ್ಯೆ ಬುಧವಾರ ಸುಳ್ಯಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ ಅವರು ಸಚಿವರನ್ನು ಸ್ವಾಗತಿಸಿ, ಸುಳ್ಯ ನಗರ ಹಾಗೂ ತಾಲೂಕಿನ ಅಭಿವೃದ್ಧಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಮತ್ತು ಅಗತ್ಯ ಕ್ರಮಗಳ ಕುರಿತು ಸಚಿವರ ಗಮನಕ್ಕೆ ತಂದರು.ಸಮಸ್ಯೆಗಳನ್ನು ಆಲಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು, ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಗುರುವಾರ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ಸಂಬಂಧಿಸಿದ ವಿಷಯಗಳ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸುಳ್ಯ ವಾಲಿಬಾಲ್ ಅಸೋಸಿಯೇಷನ್ ಉಪಾಧ್ಯಕ್ಷ ಕೆ.ಬಿ. ಇಬ್ರಾಹಿಂ, ಸುಳ್ಯ ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಶಹೀದ್ ಪಾರೆ ಹಾಗೂ ಸಚಿವರ ಆಪ್ತ ಸಹಾಯಕ ಶಿವಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.