ಮೋದಿ ಜನ್ಮದಿನಾಚರಣೆ: ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹಣ್ಣುಹಂಪಲು ವಿತರಣೆ
ಸುಳ್ಯ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ಸುಳ್ಯ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು

ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ, ಪದಾಧಿಕಾರಿಗಳಾದ ಸುನಿಲ್ ಕೇರ್ಪಳ, ದಿಲೀಪ್ ಉಪ್ಪಳಿಕೆ, ಲತೀಶ್ ಗುಂಡ್ಯ, ರಾಜೇಶ್ ಕಿರಿಭಾಗ, ನಿಕೇಶ್ ಉಬರಡ್ಕ, ಮನೀಶ್ ಪದೇಲ, ನಿಖಿಲ್ ಮಡ್ತಿಲ, ಪ್ರಣೀತ್ ಕಾಣಕ್ಕೂರು, ಆಶೀಶ್ ರಾವ್, ಯತೀಶ್ ಹರಿಹರ, ವಿನಯ ನಾರಾಲು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಸುಳ್ಯ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಶಿವಕುಮಾರ್ ಹಾಗೂ ಆಸ್ಪತ್ರೆಯ ಸಿಬ್ಬಂದಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು.



Scroll To Top