ಮಂಗಳೂರು: ಮಾಣಿ ಫ್ಲೈಓವರ್ನಲ್ಲಿ ಟೆಂಪೊ ಪಿಕಪ್ ಹಾಗೂ ಆಲ್ಟೊ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಮಡಿಕೇರಿ ಮೂಲದ ನೆಬಿಸ (64) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಆಲ್ಟೊ ಕಾರಿನಲ್ಲಿ ಚಾಲಕ ಸೇರಿದಂತೆ ಒಟ್ಟು ಐವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರ ಪೈಕಿ ಓರ್ವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಭೀರವಾಗಿ ಗಾಯಗೊಂಡಿರುವ ಇತರ ಮೂವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮೃತ ಮಹಿಳೆಯ ಮೃತದೇಹವನ್ನು ತುಂಬೆ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಪಘಾತದ ಕುರಿತು ಹೆಚ್ಚಿನ ವಿವರಗಳು ಹಾಗೂ ಗಾಯಾಳುಗಳ ನಿಖರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



