ಮರ್ಕಂಜ: ಗ್ರಾಮದ ದಾಸರಬೈಲು ಎಂಬಲ್ಲಿ ಶಾಸಕರ ವಿಶೇಷ ಅನುದಾನದಡಿ ₹23 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಂಬೇಡ್ಕರ್ ಭವನವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರು ಉದ್ಘಾಟಿಸಿದರು.
ಸ್ಥಳೀಯ ಜನರ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಉಪಯುಕ್ತವಾಗುವ ಉದ್ದೇಶದಿಂದ ನಿರ್ಮಿಸಲಾಗಿರುವ ಅಂಬೇಡ್ಕರ್ ಭವನವು ಗ್ರಾಮಸ್ಥರಿಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಕಾರ್ಯದರ್ಶಿ ಸತೀಶ್ ನಾಯ್ಕ ಅರಂತೋಡು, ಶಕ್ತಿ ಕೇಂದ್ರ ಪ್ರಮುಖರಾದ ಶಂಕರನಾರಾಯಣ ಉಪಾಧ್ಯಾಯ, ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ರಾವ್, ಮಾಜಿ ಸದಸ್ಯೆ ಸರಸ್ವತಿ, ಯುವಶಕ್ತಿ ಬಳಗದ ಅಧ್ಯಕ್ಷರು ಹಾಗೂ ಊರಿನ ಫಲಾನುಭವಿಗಳು ಉಪಸ್ಥಿತರಿದ್ದರು.
ಗ್ರಾಮದ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಭವನದ ನಿರ್ಮಾಣವು ಮಹತ್ವದ ಹೆಜ್ಜೆಯಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮಸ್ಥರ ವಿವಿಧ ಕಾರ್ಯಕ್ರಮಗಳಿಗೆ ಇದು ಸಹಕಾರಿಯಾಗಲಿದೆ.