Featured, ಸ್ಥಳೀಯ

ಮರ್ಕಂಜ ದಾಸರಬೈಲಿನಲ್ಲಿ ₹23 ಲಕ್ಷ ವೆಚ್ಚದ ಅಂಬೇಡ್ಕರ್ ಭವನ ಉದ್ಘಾಟನೆ

ಗ್ರಾಮೀಣ ಪ್ರದೇಶದ ಜನರಿಗೆ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಿಸಲಾದ ಭವನವನ್ನು ಶಾಸಕರು ಲೋಕಾರ್ಪಣೆಗೊಳಿಸಿದರು.

ಸುಳ್ಯ: ಮರ್ಕಂಜ ಗ್ರಾಮದ ದಾಸರಬೈಲು ಎಂಬಲ್ಲಿ ಶಾಸಕರ ವಿಶೇಷ ಅನುದಾನದ ₹23 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಶಾಸಕರು ಉದ್ಘಾಟಿಸಿದರು.

ಗ್ರಾಮೀಣ ಪ್ರದೇಶದ ಜನರಿಗೆ ವಿವಿಧ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗುವ ನಿಟ್ಟಿನಲ್ಲಿ ನಿರ್ಮಿಸಲಾದ ಭವನವನ್ನು ಶಾಸಕರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಕೃಷ್ಣಯ್ಯ ಮೂಲೆತೋಟ, ಕಾರ್ಯದರ್ಶಿ ಸತೀಶ್ ನಾಯ್ಕ ಅರಂತೋಡು, ಶಕ್ತಿಕೇಂದ್ರ ಪ್ರಮುಖ ಶಂಕರನಾರಾಯಣ ಉಪಾಧ್ಯಾಯ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ರಾವ್, ಮಾಜಿ ಸದಸ್ಯೆ ಸರಸ್ವತಿ, ಯುವಶಕ್ತಿ ಬಳಗದ ಅಧ್ಯಕ್ಷರು, ಸ್ಥಳೀಯ ಮುಖಂಡರು ಹಾಗೂ ಊರಿನ ಫಲಾನುಭವಿಗಳು ಉಪಸ್ಥಿತರಿದ್ದರು.