Featured, ಇತರೆ

ಸುಳ್ಯ : ದೆಹಲಿ ಚಲೋ ಪ್ರತಿಭಟನಾ ಪಾದಯಾತ್ರೆಯಲ್ಲಿ ಟಿ.ಎಂ. ಶಹೀದ್ ತೆಕ್ಕಿಲ್, ಸಲೀಂ ಪೆರುಗೋಡಿ ಭಾಗಿ

ಎಸ್‌ಐಆರ್ ರದ್ದು, ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ

ಸುಳ್ಯ, ಅ.12: ಎಸ್‌ಐಆರ್‌ (Special Intensive Revision) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಹಮ್ಮಿಕೊಂಡಿರುವ ‘ದೆಹಲಿ ಚಲೋ’ ಪ್ರತಿಭಟನಾ ಪಾದಯಾತ್ರೆಯಲ್ಲಿ ಸುಳ್ಯದ ಕಾಂಗ್ರೆಸ್ ಮುಖಂಡ ಟಿ.ಎಂ. ಶಹೀದ್ ತೆಕ್ಕಿಲ್ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಸಲೀಂ ಪೆರುಗೋಡಿ ಭಾಗವಹಿಸಿದ್ದಾರೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿರುದ್ಧ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಖಂಡಿಸಿ ದೆಹಲಿಯಲ್ಲಿ ಆಯೋಜಿಸಲಾದ ಪ್ರತಿಭಟನೆಯಲ್ಲಿ ದೇಶದ ವಿವಿಧ ಭಾಗಗಳಿಂದ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.

ಪ್ರತಿಭಟನಾ ಪಾದಯಾತ್ರೆಯಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ್, ಉಮಾಶ್ರೀ, ಸಚಿವರಾದ ಎನ್. ಚೆಲುವರಾಯಸ್ವಾಮಿ, ಕೆ. ಶಿವಲಿಂಗೇಗೌಡ ಸೇರಿದಂತೆ ಹಲವು ಪ್ರಮುಖ ನಾಯಕರು ಪಾಲ್ಗೊಂಡಿದ್ದು, ಅವರೊಂದಿಗೆ ಟಿ.ಎಂ. ಶಹೀದ್ ತೆಕ್ಕಿಲ್ ಹಾಗೂ ಸಲೀಂ ಪೆರುಗೋಡಿ ಹೆಜ್ಜೆ ಹಾಕಿದರು.

ಎಸ್‌ಐಆರ್ ಪ್ರಕ್ರಿಯೆಯಿಂದ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಚುನಾವಣಾ ವ್ಯವಸ್ಥೆಯ ಪಾರದರ್ಶಕತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.

Related Posts