ಬೆಂಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ (AICC) ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ವತಿಯಿಂದ ಹಮ್ಮಿಕೊಂಡಿರುವ ಸಂಘಟನ್–ಸೃಜನ್ ಅಭಿಯಾನದಡಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಸಂಯೋಜಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ಮಾಜಿ ರಾಜ್ಯ ಕಾರ್ಯದರ್ಶಿ ಹಾಗೂ ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ (SUDA) ಅಧ್ಯಕ್ಷ ಕೆ.ಎಂ. ಮುಸ್ತಫ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಂಯೋಜಕರ ಹುದ್ದೆಗೆ ಇಂದು ಅರ್ಜಿ ಸಲ್ಲಿಸಿದರು.
ಈ ನೇಮಕಾತಿ ಪ್ರಕ್ರಿಯೆಗಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ. ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅಕ್ಟೋಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.