ರಾಜ್ಯದಲ್ಲಿ ಸಮರ್ಥ ಮಹಿಳಾ ನಾಯಕಿಯರಿದ್ದರೂ ಸಚಿವ ಸಂಪುಟದಲ್ಲಿ ಒಬ್ಬರಿಗೂ ಸ್ಥಾನ ನೀಡದಿರುವ ಬಗ್ಗೆ ಬೇಸರ
ಬೆಂಗಳೂರು, ಅ.17: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಆಗಸ್ಟ್ 20ರಂದೇ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಾಂಬಾ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು, ಎರಡು ವರ್ಷಗಳ ಅವಧಿಗೆ ವಹಿಸಿಕೊಂಡಿದ್ದ ಜವಾಬ್ದಾರಿಯನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಸಮರ್ಥ ಮಹಿಳಾ ನಾಯಕಿಯರಿದ್ದರೂ ಸಚಿವ ಸಂಪುಟದಲ್ಲಿ ಒಬ್ಬರಿಗೂ ಸ್ಥಾನ ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.
ನೂತನ ಅಧ್ಯಕ್ಷರ ನೇಮಕವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯುವುದಾಗಿ ತಿಳಿಸಿರುವ ಸೌಮ್ಯಾ ರೆಡ್ಡಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಮುಂದೆಯೂ ಸೇವೆ ಸಲ್ಲಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.