ಸುಳ್ಯ: ಸುಳ್ಯ ತಾಲೂಕಿನ ಕನಕಮಜಲು ಗ್ರಾಮದಲ್ಲಿ ಸುಮಾರು ₹1.5 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಗುದ್ದಲಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಈಗಾಗಲೇ ಪೂರ್ಣಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವುದರೊಂದಿಗೆ ಪೂರ್ಣಗೊಂಡ ಕಾಮಗಾರಿಗಳನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್, ಕೋಶಾಧಿಕಾರಿ ಸುಬೋಧ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ, ಕಾರ್ಯದರ್ಶಿ ಸುದರ್ಶನ ಪಾತಿಕಲ್ಲು, ಶಕ್ತಿಕೇಂದ್ರ ಪ್ರಮುಖ್ ಚಂದ್ರಶೇಖರ, ಜಾಲ್ಸೂರು ಶಕ್ತಿಕೇಂದ್ರ ಪ್ರಮುಖ್ ಡಾ. ಗೋಪಾಲಕೃಷ್ಣ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಜಯರಾಮ ರೈ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಗುಣವತಿ ಕೊಲ್ಲಂತಡ್ಕ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಾರದಾ ಸೇರಿದಂತೆ ಬೂತ್ ಸಮಿತಿ ಅಧ್ಯಕ್ಷರು, ಪಕ್ಷದ ಕಾರ್ಯಕರ್ತರು, ರಸ್ತೆ ಕಾಮಗಾರಿಗಳ ಫಲಾನುಭವಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.