Featured, ಇತರೆ

ಸುಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ, ಕ್ರೀಡಾ ಸಮವಸ್ತ್ರ ವಿತರಣೆ

ಸುಳ್ಯ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಅವರು ಸನ್ಮಾನಿಸಿದರು.

ಅದೇ ರೀತಿ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫಾ ಅವರು ಕ್ರೀಡಾ ಸಮವಸ್ತ್ರಗಳನ್ನು ವಿತರಿಸಿದರು.

ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸಲಾಯಿತು.

Related Posts