ಅರಂತೋಡು: ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ (AHYA) ಸುವರ್ಣ ಮಹೋತ್ಸವದ ಅಂಗವಾಗಿ ಭಾರತೀಯ ಅಂಚೆ ಇಲಾಖೆಯ ಸಹಯೋಗದೊಂದಿಗೆ ನವೆಂಬರ್ 14ರಂದು ಅರಂತೋಡಿನಲ್ಲಿ ವಿಶೇಷ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವನ್ನು ಆಯೋಜಿಸಲಾಗಿದೆ.
ಅರಂತೋಡಿನ ಪಠೇಲ್ ವಾಣಿಜ್ಯ ಸಂಕೀರ್ಣದಲ್ಲಿ ನಡೆಯಲಿರುವ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಹೊಸ ಆಧಾರ್ ಕಾರ್ಡ್ ನೋಂದಣಿ, ಹೆಸರು ಮತ್ತು ವಿಳಾಸ ತಿದ್ದುಪಡಿ, ಮೊಬೈಲ್ ಸಂಖ್ಯೆ ನವೀಕರಣ ಹಾಗೂ ಬಯೋಮೆಟ್ರಿಕ್ ಮಾಹಿತಿ ಪರಿಷ್ಕರಣೆ ಸೇರಿದಂತೆ ವಿವಿಧ ಆಧಾರ್ ಸಂಬಂಧಿತ ಸೇವೆಗಳನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಶಿಬಿರದಲ್ಲಿ ಭಾರತೀಯ ಅಂಚೆ ಇಲಾಖೆಯ ನುರಿತ ಸಿಬ್ಬಂದಿ ಉಪಸ್ಥಿತರಿದ್ದು, ಆಧಾರ್ ಸಂಬಂಧಿತ ಸೇವೆಗಳನ್ನು ಒದಗಿಸಲಿದ್ದಾರೆ. ಸಾರ್ವಜನಿಕರು ತಮ್ಮ ಅಗತ್ಯ ದಾಖಲೆಗಳೊಂದಿಗೆ ಶಿಬಿರಕ್ಕೆ ಆಗಮಿಸಿ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.
ವಿಶೇಷವಾಗಿ ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಹಾಗೂ ಆಧಾರ್ ಮಾಹಿತಿಯಲ್ಲಿ ತಿದ್ದುಪಡಿ ಮಾಡಿಸಿಕೊಳ್ಳಬೇಕಿರುವ ಸಾರ್ವಜನಿಕರಿಗೆ ಈ ಶಿಬಿರ ಅನುಕೂಲಕರವಾಗಲಿದೆ.
ಅರಂತೋಡು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಷನ್ನ ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.