ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸೇನಾ ವಾಹನವೊಂದು ಕಂದರಕ್ಕೆ ಬಿದ್ದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಈ ಕುರಿತು ಸೇನಾ ವಕ್ತಾರರು, ”ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಶನಿವಾರ (ಜ.4) ನಡೆದ ರಸ್ತೆ ಅಪಘಾತದಲ್ಲಿ ಮೂವರು ಯೋಧರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಹವಾಮಾನ ವೈಪರೀತ್ಯ ಹಾಗೂ ಭಾರೀ ಹಿಮಪಾತದಿಂದಾಗಿ ವಾಹನ ಸ್ಕಿಡ್ ಆಗಿ ಕಣಿವೆಗೆ ಬಿದ್ದಿದೆ. ಗಾಯಾಳು ಸೈನಿಕರನ್ನು ಸ್ಥಳೀಯರ ನೆರವಿನಿಂದ ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ರಕ್ಷಿಸಲಾಯಿತು. ತಕ್ಷಣವೇ ನೆರವು ನೀಡಿದ ನಾಗರಿಕರಿಗೆ ನಾವು ಕೃತಜ್ಞರಾಗಿರುತ್ತೇವೆ ಎಂದು ಅವರು ಹೇಳಿದರು.





m

