Featured, ಅಂಕಣ, ಸ್ಥಳೀಯ

ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಆನೆಚೌಕೂರು ಗೇಟ್ ಬಳಿ ಸ್ವಾಗತ

ಕೊಡಗು ಜಿಲ್ಲೆಗೆ ಆಗಮಿಸುತ್ತಿರುವ ಮಾನ್ಯ ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಅವರನ್ನು ಆನೆ ಚೌಕೂರ್ ಗೇಟ್ ಬಳಿ ಇಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ನವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.

ಮಾನ್ಯ ಸಚಿವರೊಂದಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಶ್ರೀ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಹಾಗೂ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್. ಆರ್. ಮೆಹರೋಜ್ ಖಾನ್ ಮತ್ತಿತರ ಪ್ರಮುಖರು ಆಗಮಿಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮೀದೇರಿರ ನವೀನ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಇಸ್ಮಾಯಿಲ್, ಹಿರಿಯ-ಕಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಾನ್ಯ ಸಚಿವರೊಂದಿಗೆ ಆಗಮಿಸಿದ ಸ್ಥಳೀಯ ಶಾಸಕರಾದ ಶ್ರೀ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ರವರು ಮಗದೊಮ್ಮೆ ಸಚಿವರನ್ನು ಕ್ಷೇತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಗತಿಸಿದರು.

m