Featured, ಅಂಕಣ, ಸ್ಥಳೀಯ

ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಾತ್ಮ ಗಾಂಧಿ ಹುತಾತ್ಮ ದಿನ ಆಚರಣೆ

ಮಂಗಳೂರು ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರೂ ಯುವ ಕೇಂದ್ರ, ಮಂಗಳೂರು ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಚಿತ್ತಾರ ಮಹಿಳಾ ಮಂಡಳಿ ಆಳಪೆ ಪಡೀಲ್ ಇವರ ಸಂಯುಕ್ತ ಆಶ್ರಯದಲ್ಲಿ ಜ.30 ರಂದು ಮಹಾತ್ಮ ಗಾಂಧಿ ಹುತಾತ್ಮ ದಿನವನ್ನು ಬಲ್ಮಠ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಬಾಳರವರು ವಹಿಸಿದ್ದರು.

ವೇದಿಕೆಯಲ್ಲಿ ಅತಿಥಿಗಳಾಗಿ ನೆಹರೂ ಯುವ ಕೇಂದ್ರದ ಅಧಿಕಾರಿಗಳಾದ ಜಗದೀಶ್ ರವರು,ಕ್ರೀಡಾ ಸಚಿವಾಲಯದ ಅಧಿಕಾರಿಗಳಾದ ಪ್ರದೀಪ್ ಡಿಸೋಜ,NSS ಅಧಿಕಾರಿಗಳಾದ ಉದಯಕುಮಾರ್ ರವರು, ಹಾಗೂ ಡಾ.ಸುಮನಾ, ಚಿತ್ತಾರ ಮಹಿಳಾ ಮಂಡಳಿ ಅಧ್ಯಕ್ಷರಾದ ಪ್ರೇಮಿ ಫೆರ್ನಾಂಡಿಸ್, ಬಲ್ಮಠ ಮಹಿಳಾ ಕಾಲೇಜಿನ ಚಂದ್ರಿಕಾ ಮೊದಲಾದವರು ಉಪಸ್ಥಿತರಿದ್ದರು.

NYK ಅಧಿಕಾರಿಗಳಾದ ಜಗದೀಶರವರು ಸ್ವಾಗತಿಸಿ,ಮಂಗಳೂರು ವಿಶ್ವವಿದ್ಯಾನಿಲಯದ MSW ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು.

ಎಲ್ಲಾ ಅತಿಥಿಗಳು ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾಂಜಲಿಗೈದರು. ಹಾಗೂ ಹುತಾತ್ಮರಾದ ಎಲ್ಲರಿಗೆ ಗೌರವವನ್ನು ಸಲ್ಲಿಸಲಾಯಿತು. NYK ಯುವ ಕ್ರೀಡಾ ನಾಯಕಿಯಾದ ನಮಿತಾ ರವರುಧನ್ಯವಾದ ನೀಡುವುದರೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

m

Related Posts