ಪೆರಾಜೆ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ಕೊಡಗು ಜಿಲ್ಲಾ ಘಟಕದ ವತಿಯಿಂದ “ಕನ್ನಡ ಶಾಲೆ ಉಳಿಸಿ ಬೆಳೆಸಿ” ಅಭಿಯಾನದ 50ನೇ ಸಂಭ್ರಮ ಕಾರ್ಯಕ್ರಮವು ಫೆಬ್ರವರಿ 16ರಂದು ಪೆರಾಜೆಯ ಕನ್ನಡ ಪೆರಾಜೆ ಶಾಲೆಯಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಗಡಿನಾಡ ಕನ್ನಡಿಗರ ಸ್ನೇಹ ಸಮ್ಮಿಲನ, ವಿವಿಧ ಸವಲತ್ತು ವಿತರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮಗಳು ನಡೆದವು.
ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಚಿವ ಸತೀಶ್ ಜಾರಕಿಹೊಳಿ ಅವರು ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಸಾಮಾಜಿಕ, ಆರೋಗ್ಯ, ಮಾಧ್ಯಮ, ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ ವ್ಯಕ್ತಿಗಳಿಗೆ “ಸ್ವಾಭಿಮಾನಿ ಕನ್ನಡಿಗ ಪ್ರಶಸ್ತಿ” ನೀಡಿ ಗೌರವಿಸಲಾಯಿತು. ಪ್ರಶಸ್ತಿ ಪಡೆದವರಲ್ಲಿ ಹಾಜಿ ಉಮರ್ ಬೆಂಗಳೂರು, ಟಿ.ಎಂ. ಶಹೀದ್ ತೆಕ್ಕಿಲ್, ಅಬ್ದುಲ್ ರಹಿಮಾನ್ ಸಂಕೇಶ್, ಶಾಹುಲ್ ಹಮೀದ್ ಕುತ್ತಮೊಟ್ಟೆ, ಶಶಿ ಕಿರಣ್, ಚೇತನ್ ಅಹಿಂಸಾ, ಸಾಜಿದ್ ಐ.ಜಿ ಗೂನಡ್ಕ, ಫೈಝಲ್ ಕಟ್ಟೆಕಾರ್ಸ್, ನಝೀರ್ ಕೊಯನಾಡು, ಹನೀಫ್ ಎಸ್.ಪಿ. ಕೊಯನಾಡು, ಭವ್ಯ ಕೆ.ವಿ.ಜಿ, ಜಾಬಿರ್ ನಿಜಾಮಿ, ಕರೀಂ ಕೇಳ್ಕರ್, ಹರೀಶ್ ಬಂಟ್ವಾಳ, ಹಸೈನಾರ್ ಜಯನಗರ ಮತ್ತು ಸಂಶೀರ್ ಬುಡೋಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿತ್ರನಟ ಚೇತನ್ ಅಹಿಂಸಾ ಅವರು ಮಾತನಾಡುತ್ತಾ, “ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆಯು ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ನಡೆಸುತ್ತಿರುವ ಕಾರ್ಯಚಟುವಟಿಕೆಗಳು ಅತ್ಯಂತ ಶ್ಲಾಘನೀಯವಾಗಿವೆ. ಸಮಾಜದ ಅಭಿವೃದ್ಧಿಗೆ ಬಣ್ಣದ ಮಾತುಗಳು ಸಾಲವು; ಇಂತಹ ಸಂಘಟನೆಗಳ ಶ್ರಮ ಮತ್ತು ಕಾರ್ಯಗಳು ಅಗತ್ಯವಾಗಿದೆ. ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಇಂತಹ ಸಂಘಟನೆಗಳನ್ನು ಬೆಂಬಲಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆಯ ರಾಜಧ್ಯಕ್ಷ ಶಶಿ ಕಿರಣ್ ಬಿ, ರಾಜ್ಯ ಸಮಿತಿ ಕಾರ್ಯದರ್ಶಿ ಕೃಷ್ಣ ಪೂಜಾರಿ, ಉಪಾಧ್ಯಕ್ಷ ಕುಮಾರ್ ಗೌಡ, ರಾಜ್ಯ ಕಾರ್ಮಿಕ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ರಾಜ್ಯ ಉಪ ಕಾರ್ಯದರ್ಶಿ ಮೋಹನ್ ಕುಮಾರ್, ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ. ಶಹೀದ್, ಉದ್ಯಮಿ ಅಬ್ದುಲ್ ರಹಮಾನ್ ಸಂಕೇಶ್, ಮಹಮ್ಮದ್ ಇಕ್ಬಾಲ್ ಎಲಿಮಲೆ, ಸುಳ್ಯ ನಗರ ಪಂಚಾಯತ್ ಸದಸ್ಯರು ಉಮ್ಮರ್ ಕೆ.ಎಸ್., ಶರೀಫ್ ಕಂಠಿ, ನಾಮ ನಿರ್ದೇಶಕ ಸದಸ್ಯ ಸಿದ್ದೀಕ್ ಕೋಕ್ಕೊ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಿ.ಕೆ. ಹಮೀದ್, ಸದಸ್ಯ ಹನೀಫ್ ಎಸ್.ಕೆ., ಖ್ಯಾತ ಗಾಯಕ ಅಶ್ರಫ್ ಸವಣೂರು ಮತ್ತು ಸಮದ್ ಗಡಿಯಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾ ಅಧ್ಯಕ್ಷ ಮತ್ತು ಕಾರ್ಯಕ್ರಮ ಸಂಘಟಕ ಉನೈಸ್ ಪೆರಾಜೆ ಅವರು ಸ್ವಾಗತ ಮಾಡಿದರು. ನೌಫಾಲ್ ವಿಟ್ಲ ಕಾರ್ಯಕ್ರಮವನ್ನು ನಿರೂಪಿಸಿದರೆ, ಅಡ್ವಕೇಟ್ ಭಾಷಿತ್ ಅವರು ವಂದನೆ ಸಮರ್ಪಿಸಿದರು.
ಈ ಸಮಾರಂಭದ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಶೆಯಲ್ಲಿ ಸಂಘಟನೆಯ ಪ್ರಯತ್ನಗಳು ಮತ್ತೊಮ್ಮೆ ಮಿಂಚಿದವು.





m
