Featured, ರಾಜಕೀಯ, ಸ್ಥಳೀಯ

ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ನೇತೃತ್ವದಲ್ಲಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ |ಕೇಂದ್ರ ಸರ್ಕಾರದ “ವಖ್ಫ್ ತಿದ್ದುಪಡಿ ಮಸೂದೆ”ಗೆ ವಿರೋಧ

ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ಸಂವಿಧಾನ ವಿರೋಧಿ “ವಖ್ಫ್ ತಿದ್ದುಪಡಿ ಮಸೂದೆ”ಯ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು

ಪ್ರತಿಭಟನೆಯಲ್ಲಿ WIM ಮಂಗಳೂರು ನಗರ ಜಿಲ್ಲಾಧ್ಯಕ್ಷೆ ನಿಶಾ ವಾಮಂಜೂರು, ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯೆ ಮಿಸ್ರಿಯಾ ಕಣ್ನೂರು, WIM ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, ಜಿಲ್ಲಾ ಕಾರ್ಯದರ್ಶಿ ಅಝ್ವೀನಾ ಅಕ್ರಮ್, ಜಿಲ್ಲಾ ಸಮಿತಿ ಸದಸ್ಯೆ ಹಾಝರ ಮಲಾರ್ ಹಾಗೂ ಕ್ಷೇತ್ರ, ಬ್ಲಾಕ್, ವಾರ್ಡ್ ಮತ್ತು ಬ್ರಾಂಚ್ ಸಮಿತಿಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

m