ಕರ್ನಾಟಕ ಸರ್ಕಾರ ಅನ್ನಭಾಗ್ಯ ಸ್ಕೀಮ್ ನಡಿ 5 ಕೆ.ಜಿ ಅಕ್ಕಿ ಬದಲು ಹಣ ನೀಡುವುದನ್ನು ಫೆಬ್ರವರಿ ತಿಂಗಳಿಂದ ನಿಲ್ಲಿಸಲಿದೆ. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್ ಮುನಿಯಪ್ಪ ಅವರು, ಅಕ್ಕಿಯ ದಾಸ್ತಾನು ಸಾಕಷ್ಟಿದ್ದರೂ ಕೇಂದ್ರ ಸರ್ಕಾರ ಅದನ್ನು ನೀಡಲು ನಿರಾಕಸಿದ್ದರಿಂದ 5 ಕೆ.ಜಿ ಅಕ್ಕಿಯ ಬದಲು ಹಣ ನೀಡಲಾಗುತಿತ್ತು, ಆದರೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿರುವುದರಿಂದ ಫೆಬ್ರವರಿ ತಿಂಗಳಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದಂತೆ 10 ಕೆ.ಜಿ. ಅಕ್ಕಿ ನೀಡಲಾಗುವುದು ಎಂದು ಹೇಳಿದರು.




m
