ಫೆಬ್ರುವರಿ 20,ಮಂಗಳೂರು : ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲೆಯ ಜಿಲ್ಲಾಧ್ಯಕ್ಷೆಯಾಗಿರುವ ನಿಶಾ ವಾಮಂಜೂರ್ ರವರ ನೇತೃತ್ವದ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀಯುತ ಮಂಜುನಾಥ್ ಅವರನ್ನು ಭೇಟಿಯಾಗಿ *ವಿದ್ಯಾಶ್ರೀ* ಯೋಜನೆಯಲ್ಲಿ ನಡೆಯುತ್ತಿರುವ ಗೊಂದಲ ಮತ್ತು ಅರ್ಹ ವಿದ್ಯಾರ್ಥಿನಿಯರಿಗೆ ಬದಲಾಗಿ ಶಿಫಾರಸು ಮತ್ತು ರಾಜಕೀಯ ಒತ್ತಡಕ್ಕೆ ಮಣಿದು ಫಲಾನುಭವಿಗಳನ್ಧು ಆಯ್ಕೆ ಮಾಡುತ್ತಿರುವ ಬಗ್ಗೆ ಗಮನ ಸೆಳೆದು ಸಮಸ್ಯೆಯನ್ನು ಬಗೆ ಹರಿಸುವಂತೆ ಆಗ್ರಹಿಸಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿರುವ ಸಿಬ್ಬಂದಿಗಳ ಕೊರತೆ ಮತ್ತು ಅಸಮರ್ಪಕ ನಿರ್ವಹಣೆಯ ಬಗ್ಗೆ ಗಮನ ಸೆಳೆದು ಇದಕ್ಕೆ ಶೀಘ್ರ ಪರಿಹಾರ ಕಲ್ಪಿಸದಿದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಯಿತು.
ನಿಯೋಗದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷೆ ರೇಷ್ಮಾ ಪಾಂಡೇಶ್ವರ, ಅಡ್ಯಾರ್ ಗ್ರಾಮ ಪಂಚಾಯತ್ ಅಧ್ಯಕ್ಷ ಯಾಸೀನ್ ಅರ್ಕುಳ ರವರು ಉಪಸ್ಥಿತರಿದ್ದರು.




m
