ಶಾಸಕರುಗಳಾದ ಭರತ್ ಶೆಟ್ಟಿ, ಹರೀಶ್ ಪೂಂಜಾ ಸಹಿತ ಸಂಘಪರಿವಾರದ ಪ್ರಮುಖರ ಮೇಲೆ ಸು ಮಟೋ ಮೊಕದ್ದಮೆ ಹೂಡಲು ಒತ್ತಾಯ
ಮಂಗಳೂರು : ಶಾಂತವಾಗಿರುವ ದ ಕ ಜಿಲ್ಲೆಯಲ್ಲಿ ದಿಗಂತ್ ನಾಪತ್ತೆ ನೆಪದಲ್ಲಿ ಕೋಮು ದ್ವೇಷ ಹರಡಿ, ತಮ್ಮ ಬೇಳೆ ಬೇಯಿಸಲು ಮತೀಯ ಸಂಘರ್ಷಕ್ಕೆ ಯತ್ನಿಸಿದ ಶಾಸಕರುಗಳಾದ ಭರತ್ ಶೆಟ್ಟಿ, ಹರೀಶ್ ಪೂಂಜಾ ಸಹಿತ ಸಂಘಪರಿವಾರದ ಪ್ರಮುಖರ ಮೇಲೆ ಸು ಮಟೋ ಮೊಕದ್ದಮೆ ಹೂಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಎಸ್ ಪಿ ಅವರನ್ನು “ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ” ಯ ನಿಯೋಗ ಭೇಟಿ ಮಾಡಿ ಒತ್ತಾಯಿಸಿತು. ಮನವಿ ಸಲ್ಲಿಸಿತು.

ನಿಯೋಗದಲ್ಲಿ ವೇದಿಕೆಯ ಸಂಚಾಲಕ, ಸಿಪಿಐಎಂ ದ.ಕ. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ರಾಜ್ಯ ವಕ್ತಾರ ಎಮ್ ಜಿ ಹೆಗ್ಡೆ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ್ ಬಿ, ಆಮ್ ಆದ್ಮಿಯ ಎಸ್ ಎಲ್ ಪಿಂಟೊ, ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮಾಜಿ ಮೇಯರ್ ಕೆ ಅಶ್ರಫ್, ಕರ್ನಾಟಕ ಪ್ರಾಂತ ರೈತ ಸಂಘದ ಕೆ ಯಾದವ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಎಐಟಿಯುಸಿ ಮುಂದಾಳು ಎಚ್ ವಿ ರಾವ್, ಕಾರ್ಮಿಕ ಮುಂದಾಳುಗಳಾದ ವಿ ಕುಕ್ಯಾನ್, ಸೀತಾರಾಮ ಬೇರಿಂಜೆ, ಡಿವೈಎಫ್ಐ ನ ಬಿ ಕೆ ಇಮ್ತಿಯಾಝ್, ಸಂತೋಷ್ ಬಜಾಲ್, ಜನವಾದಿ ಮಹಿಳಾ ಸಂಘಟನೆಯ ಜಯಂತಿ ಶೆಟ್ಟಿ, ಪ್ರಮೀಳಾ ಕೆ, ಎಸ್ಎಫ್ಐ ನ ವಿನುಷ ರಮಣ, ಸಮುದಾಯ ರಾಜ್ಯ ಕಾರ್ಯದರ್ಶಿ ಮನೋಜ್ ವಾಮಂಜೂರು, ವಿವಿಧ ಸಂಘಟನೆಗಳ ಮುಂದಾಳುಗಳಾದ ಸರೋಜಿನಿ ಬಂಟ್ವಾಳ, ಕರುಣಾಕರ ಮಾರಿಪಳ್ಳ, ಸಮರ್ಥ್ ಭಟ್, ನೀತ್ ಶರಣ್, ಯೋಗಿತಾ ಮುಂತಾದವರು ಉಪಸ್ಥಿತರಿದ್ದರು.





m

