Featured, ಅಂಕಣ, ರಾಜ್ಯ

ಮಗು ಹಠ ಮಾಡುತ್ತಿದೆ ಎಂದು ರೋಷಗೊಂಡು ಡೈಪರ್ ಒಳಗೆ ಖಾರದ ಪುಡಿ ಹಾಕಿ ಅಂಗನವಾಡಿ ಸಹಾಯಕಿಯಿಂದ ವಿಕೃತಿ!

ರಾಮನಗರ: ಅಂಗನವಾಡಿಯಲ್ಲಿ ಎರಡುವರೆ ವರ್ಷದ ಮಗುವಿನ ಮೇಲೆ ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈ ಮೇಲೆ ಬರೆಹಾಕಿ, ಡೈಪರ್‌ಗೆ ಕಾರದಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ಬೆಳಕಿಗೆ ಬಂದಿದೆ.

ಮಂಗಳವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಹಾರಾಜರಕಟ್ಟೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.

 ದೀಕ್ಷಿತ್ (2.5) ಸಂತ್ರಸ್ತ ಬಾಲಕ ಎನ್ನಲಾಗಿದೆ . ಮಂಗಳವಾರ ಮಧ್ಯಾಹ್ನ ಮಗುವಿನ ಪೋಷಕರಾದ ರಮೇಶ್ ನಾಯಕ್, ಪತ್ನಿ ಚೈತ್ರಾಬಾಯಿ ತಮ್ಮ ಮಗುವನ್ನು ಕರೆದುಕೊಂಡು ಬರಲು ಅಂಗನವಾಡಿಗೆ ತೆರಳಿದ್ದ ಸಂಧರ್ಬದಲ್ಲಿ ಬಾಲಕ ಅಳುತ್ತಿರುವುದನ್ನು ಗಮನಿಸಿದ್ದಾರೆ.

ಪರಿಸ್ಥಿತಿ ಏನಾಯ್ತು ಎಂದು ವಿಚಾರಿಸಿದಾಗ, ಮಗು ಹಠ ಮಾಡುತ್ತಿದ್ದ ಕಾರಣ ಅಂಗನವಾಡಿ ಸಹಾಯಕಿ ಚಂದ್ರಮ್ಮ ಮಗುವಿನ ಎಡ ಕೈ ಮೇಲೆ ಬರೆ ಹಾಕಿ ಡೈಪರ್ ಒಳಗೆ ಕಾರದಪುಡಿ ಹಾಕಿರುವ ಘಟನೆ ತಿಳಿದು ಬಂದಿದೆ..

ಘಟನೆ ಸಂಬಂಧ ಪೋಷಕರು ಸಿಡಿಪಿಒ ತಾಲೂಕು ಅಧಿಕಾರಿ ನಾರಾಯಣ್‌ ಅವರಿಗೆ ದೂರು ಸಲ್ಲಿಸಿದ್ದಾರೆ. ಅವರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಅಂಗನವಾಡಿ ಸಹಾಯಕಿಯ ವಿಚಾರಣೆ ನಡೆಸಿ, ಮೇಲಧಿಕಾರಿಗಳಿಗೆ ಪತ್ರ ಬರೆದು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಅಂಗನವಾಡಿ ಸಹಾಯಕಿ ಚಂದ್ರಮ್ಮ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮಗುವಿನ ತಂದೆ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದು, ಸಿಬ್ಬಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

m

Related Posts