DC vs LSG IPL 2025: ಅಶುತೋಷ್ ಆರ್ಭಟ; ಡೆಲ್ಲಿಗೆ ವೀರೋಚಿತ ಜಯ; ಅಭಿಮಾನಿಗಳಿಗೆ ರಸದೌತಣ!!!!
ವಿಶಾಖಪಟ್ಟಣದಲ್ಲಿ ನಡೆದ DC VS LSG ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಒಂದು ವಿಕೆಟ್‌ನಿಂದ ಸೋಲಿಸಿತು.
ಅಶುತೋಷ್ ಅಜೇಯ 66 ರನ್ ಗಳಿಸಿ ದೆಹಲಿಗೆ ಗೆಲುವು ತಂದುಕೊಟ್ಟರು.
ಯುವ ಕ್ರಿಕೆಟಿಗ ಅಶುತೋಷ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಒಂದು ವಿಕೆಟ್‌ನಿಂದ ಸೋಲಿಸುವ ಮೂಲಕ ತಮ್ಮ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿದೆ.
ಸೋಮವಾರ ವಿಶಾಖಪಟ್ಟಣದಲ್ಲಿ ನಡೆದ ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ, ನಿಕೋಲಸ್ ಪೂರನ್ ಮತ್ತು ಮಿಚೆಲ್ ಮಾರ್ಷ್ ಅವರ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್‌ನಿಂದಾಗಿ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗಳ ನಷ್ಟಕ್ಕೆ 209 ರನ್ ಗಳಿಸಿತು.
ಇದಕ್ಕೆ ಉತ್ತರವಾಗಿ ದೆಹಲಿ ತಂಡ 19.3 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 211 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿದೆ.




m

