ಕೋಳಿ ಮಾಂಸ ಖರೀದಿಸಲು ಬಂದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 50 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಮಲಪ್ಪುರಂ ವಂಡೂರಿನ ಚೆಟ್ಟಿಯಾರಮ್ಮಾಳ್ ನಿವಾಸಿ ಅಶ್ರಫ್ ನನ್ನು ವಂಡೂರು ಪೊಲೀಸ್ ಇನ್ಸ್ ಪೆಕ್ಟರ್ ಎ.ದೀಪಕುಮಾರ್ ನೇತೃತ್ವದ ತಂಡವು ಬಾಕಕನಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಅಶ್ರಫ್ ನನ್ನು ಬಂಧಿಸಿದ್ದಾರೆ.
ಚೆಟ್ಟಿಯಾರಮ್ಮಲ್‌ನಲ್ಲಿ ಕೋಳಿ ಅಂಗಡಿ ನಡೆಸುತ್ತಿರುವ ಆರೋಪಿಯು ಕೋಳಿ ಖರೀದಿಸಲು ಬಂದಿದ್ದ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.
ನಿನ್ನೆ ಏ.5, ಮಧ್ಯಾಹ್ನ 12 ಗಂಟೆಗೆ ಈ ಘಟನೆ ನಡೆದಿದೆ. ಅಂಗಡಿ ಖಾಲಿಯಾಗಿದ್ದಾಗ ಅಲ್ಲಿಗೆ ಬಂದ ವಿದ್ಯಾರ್ಥಿಯ ಮೇಲೆ ಈ ಕೃತ್ಯ ನಡೆದಿದೆ.
ಕಳೆದ ಜನವರಿಯಲ್ಲಿಯೂ ಇದೇ ರೀತಿಯ ಘಟನೆ ನಡೆದಿತ್ತು ಎಂದು ಹೇಳಲಾಗುತ್ತಿದೆ. ಮಾಹಿತಿ ತಿಳಿದ ಮಗುವಿನ ಸಂಬಂಧಿಕರು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದು. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿರುವುದಾಗಿ ಉನ್ನತ ಮೂಲಗಳು ವರದಿ ಮಾಡಿದೆ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ರಿಮಾಂಡ್ ಮಾಡಲಾಗಿದೆ.




m
