ಬೆಳ್ತಂಗಡಿ (ಎ-23): ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಅತ್ಯಂತ ದುಃಖದ ಸಂಗತಿ, ಖಂಡನೀಯ ಮತ್ತು ಹೃದಯ ವಿದ್ರಾವಕವಾಗಿದೆ ಎಂದು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಅಮಾಯಕ ಜನರನ್ನು ನಿರ್ದಾಕ್ಷಿಣ್ಯವಾಗಿ ಕೊಂದಿದ್ದಾರೆ. ನಾವು ಇದನ್ನು ಬಲವಾಗಿ ಖಂಡಿಸುತ್ತೇವೆ. ಸಂಪೂರ್ಣ ತನಿಖೆ ನಡೆಸಿ ಭದ್ರತೆ ಮತ್ತು ಗುಪ್ತಚರ ಮಾಹಿತಿ ವೈಫಲ್ಯ ಬಗ್ಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ರೀತಿ ದಾಳಿ ನಡೆಸಿದ ಉಗ್ರರನ್ನು ಸದೆಬಡಿಯಲು ಯೋಜನೆ ರೂಪಿಸಬೇಕು.
ಕೇಂದ್ರ ಗುಪ್ತಚರ ಇಲಾಖೆ ದೇಶದ ನಾಗರೀಕರನ್ನು ರಕ್ಷಿಸುವಲ್ಲಿ ವಿಫಲವಾಗಿದೆ. ಉರಿ ಮತ್ತು ಪುಲ್ವಾಮಾದಲ್ಲಿ ನಡೆದ ಇದೇ ರೀತಿಯ ಘಟನೆಗಳಿಗಿಂತ ಈ ದಾಳಿ ಹೆಚ್ಚು ಅಪಾಯಕಾರಿ, ಖಂಡನೀಯ ಮತ್ತು ನೋವಿನಿಂದ ಕೂಡಿದೆ. ಕೇಂದ್ರ ಬಿಜೆಪಿ ಸರ್ಕಾರವು ಈ ಘಟನೆಯ ಹೊಣೆ ಹೊರಬೇಕು ಒತ್ತಾಯಿಸುತ್ತೇನೆ.
ಇಡೀ ದೇಶವು ಭಯೋತ್ಪಾದನೆಯ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಅಗಲಿಕೆಯ ನೋವನ್ನು ಮರೆಸುವ ಶಕ್ತಿಯನ್ನು ಭಗವಂತ ಕುಟುಂಬದ ಸದಸ್ಯರಿಗೆ ನೀಡಲಿ. ಮೃತರ ಕುಟುಂಬಸ್ಥರ ದುಃಖದಲ್ಲಿ ನಾವು ಭಾಗಿಯಾಗೋಣ.




m
