ಇತರೆ, ರಾಜ್ಯ, ಸ್ಥಳೀಯ

ರಾಜ್ಯದಲ್ಲಿ 265 ಗ್ರಾಮ ಪಂಚಾಯತ್ ಸದಸ್ಯ ಸ್ಥಾನ ಗಳಿಗೆ ಮೇ 25 ರಂದು ಉಪ ಚುನಾವಣೆ : ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ 223 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿಯಾಗಿರುವ ಒಟ್ಟು 265 ಸದಸ್ಯ ಸ್ಥಾನಗಳಿಗೆ ಚುನಾವಣಾ ಆಯೋಗ ಉಪಚುನಾವಣೆಗಳನ್ನು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮೇ 25 ರಂದು ಮತದಾನ ನಡೆಯಲಿದ್ದು, ಮೇ 28 ರಂದು ಮತ ಎಣಿಕೆ ನಡೆಯಲಿದೆ ಎಂದು ಅಧಿಕೃತ ಪ್ರಕಟಣೆಯೊಂದರಲ್ಲಿ ತಿಳಿಸಲಾಗಿದೆ.

ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಘೋಷಿಸಿದೆ. ಅದೇ ರೀತಿ ಸುಳ್ಯ ತಾಲೂಕಿಗೆ ಸಂಬಂಧಿಸಿದಂತೆ, ಕನಕಮಜಲು ಮತ್ತು ಕಡಬ ತಾಲೂಕಿಗೆ ಸಂಬಂಧಿಸಿದಂತೆ ಸುಬ್ರಮಣ್ಯ ಗ್ರಾಮ ಪಂಚಾಯತ್ ಗೆ ತಲಾ ಒಂದೊಂದು ಸದಸ್ಯ ಸ್ಥಾನ ಗಳಿಗೆ ಉಪ ಚುನಾವಣೆ ನಡೆಯಲಿದೆ

ಸುಳ್ಯ ತಾಲೂಕಿನ ಕನಕಮಜಲು ಮತ್ತು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಗೆ ತಲಾ ಒಂದೊಂದು ಸದಸ್ಯ ಸ್ಥಾನ ಗಳಿಗೆ  ಮೇ 25 ರಂದು ಉಪ ಚುನಾವಣೆ 

ಮೇ 5 ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಲಿದ್ದು ಮೇ 14 ಬುಧವಾರ ದಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಆಗಿರುತ್ತದೆ. ಮೇ 17 ಕ್ಕೆ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು ಮತದಾನದ ಅಗತ್ಯ ವಿದ್ದರೆ ಮೇ 25 ಭಾನುವಾರ ಮತದಾನ ನಡೆದು ಮೇ28 ಬುಧವಾರ ದಂದು ಫಲಿತಾಂಶ ಹೊರಬರಲಿದೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 9 ಗ್ರಾಮ ಪಂಚಾಯತ್ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದ್ದು ಅದೇ ರೀತಿ ಕರ್ನಾಟಕದಲ್ಲಿ ಒಟ್ಟು 265 ಗ್ರಾಮ ಪಂಚಾಯತ್ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲುಲಿದೆ

m