ಸುಳ್ಯ: ಸುಳ್ಯದ ಆಯುರ್ವೇದ ಕಾಲೇಜ್ ಬಳಿಯ ಬಿಸಿಎಂ ಹಾಸ್ಟೆಲ್‌ನ ಮುಂಭಾಗದ ಕಟ್ಟಡದಲ್ಲಿ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮಡಪಾಡಿ ನಿವಾಸಿ ವರದರಾಜ್ (45) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿ. ಅವರು ಸುಳ್ಯ ನಗರ ಪ್ರದೇಶದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.




m
