Featured, ಅಂಕಣ, ಅಂತರಾಷ್ಟ್ರೀಯ, ಕ್ರೀಡೆ

IPL 2025: ಮೇ 17 ರಿಂದ ಐಪಿಎಲ್ ದ್ವಿತೀಯಾರ್ಧ, ಜೂನ್ 3 ರಂದು ಫೈನಲ್; ಬಿಸಿಸಿಐ ಅಧಿಕೃತ ಹೇಳಿಕೆ

ಭಾರತ ಹಾಗೂ ಪಾಕಿಸ್ತಾನ ನಡುವಿನ ಸೇನಾ ಕಾರ್ಯಾಚರಣೆಯಿಂದಾಗಿ 2025 ರ ಐಪಿಎಲ್ ಅರ್ಧಕ್ಕೆ ನಿಂತಿತ್ತು. ಉಭಯ ದೇಶಗಳ ನಡುವೆ ಯುದ್ಧದ ಭೀತಿ ಎದುರಾಗಿದ್ದರಿಂದ ಮೇ 8 ರಂದು ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿದ್ದ ಬಿಸಿಸಿಐ,2025 ರ ಐಪಿಎಲ್ ಅನ್ನು ಒಂದು ವಾರ ಮುಂದೂಡಿರುವುದಾಗಿ ಮೇ 9 ರಂದು ಘೋಷಿಸಿತ್ತು. ಆದರೀಗ ಎರಡೂ ದೇಶಗಳು ಕದನ ವಿರಾಮ ಘೋಷಿಸಿರುವ ಕಾರಣ ಬಿಸಿಸಿಐ ಉಳಿದ ಪಂದ್ಯಗಳಿಗೆ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೊಸ ವೇಳಾಪಟ್ಟಿಯ ಪ್ರಕಾರ, ಮೇ 17 ರಿಂದ ಲೀಗ್ ಮತ್ತೆ ಪ್ರಾರಂಭವಾಗಲಿದ್ದು, ಒಟ್ಟು 17 ಪಂದ್ಯಗಳು 6 ಸ್ಥಳಗಳಲ್ಲಿ ನಡೆಯಲಿವೆ. ಹಾಗೆಯೇ ಫೈನಲ್ ಪಂದ್ಯವು ಜೂನ್ 3 ರಂದು ನಡೆಯಲಿದೆ. ಈ ಬಗ್ಗೆ ಇಂಡಿಯನ್ ಪ್ರೀಮಿಯರ್ ಲೀಗ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಉಳಿದ ಪಂದ್ಯಗಳನ್ನು ಬೆಂಗಳೂರು, ದೆಹಲಿ, ಲಕ್ನೋ, ಮುಂಬೈ, ಅಹಮದಾಬಾದ್ ಮತ್ತು ಜೈಪುರ ಸೇರಿದಂತೆ 6 ಸ್ಥಳಗಳಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಈ ಅವಧಿಯಲ್ಲಿ, ಉಳಿದ ಲೀಗ್ ಪಂದ್ಯಗಳನ್ನು ಮೇ 17 ರಿಂದ ಮೇ 25 ರವರೆಗೆ ಆಡಲಾಗುವುದು, ಇದರಲ್ಲಿ 2 ಡಬಲ್ ಹೆಡರ್‌ ಪಂದ್ಯಗಳು ಸೇರಿವೆ. ಅಂದರೆ ಒಂದೇ ದಿನ 2 ಪಂದ್ಯಗಳು ನಡೆಯಲಿದ್ದು, ಈ ಡಬಲ್ ಹೆಡರ್ ಪಂದ್ಯಗಳನ್ನು ಎರಡು ಭಾನುವಾರಗಳಂದು ನಡೆಸಲು ತೀರ್ಮಾನಿಸಲಾಗಿದೆ. ಇದಲ್ಲದೆ, ಪ್ಲೇಆಫ್ ಪಂದ್ಯಗಳು ಮೇ 29 ರಿಂದ ಪ್ರಾರಂಭವಾಗಲಿದ್ದು, ಫೈನಲ್ ಪಂದ್ಯ ಜೂನ್ 3 ರಂದು ನಡೆಯಲಿದೆ. ಆದರೆ ಲೀಗ್ ಪಂದ್ಯಗಳಿಗೆ ಸ್ಥಳಗಳನ್ನು ಪ್ರಕಟಿಸಿರುವ ಬಿಸಿಸಿಐ ಪ್ಲೇಆಫ್ ಪಂದ್ಯಗಳ ಸ್ಥಳಗಳನ್ನು ಇನ್ನೂ ನಿರ್ಧರಿಸಿಲ್ಲ.

m

Related Posts