ಪಲಾನುಭವಿಗಳನ್ನು ಕರೆದುಕೊಂಡು ಹೋಗುವ ಮತ್ತು ಅವರ ಉಟೋಪಚಾರದ ವ್ಯವಸ್ಥೆ ಬಗ್ಗೆ ತಾಲೂಕು ಅಧಿಕಾರಿಗಳೊಂದಿಗೆ ರಾಧಾಕೃಷ್ಣ ಬೊಳ್ಳೂರು ಪರಾಮರ್ಶೆ
ಇಂದು ಮಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಮತ್ತು ವಿವಿಧ ಇಲಾಖೆಗಳ ಸೌಲಭ್ಯ ವಿತರಣೆ ಕಾರ್ಯಕ್ರಮಕ್ಕೆ ಸುಳ್ಯದಿಂದ ಪಲಾನುಭವಿಗಳನ್ನು ಮಂಗಳೂರಿಗೆ ಕರೆದುಕೊಂಡು ಹೋಗುವ ಮತ್ತು ಅವರಿಗೆ ಉಟೋಪಚಾರ ವ್ಯವಸ್ಥೆಯ ಬಗ್ಗೆ
ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು ರವರು ಗುರುವಾರ ದಂದು ಸುಳ್ಯ ತಹಶೀಲ್ದಾರ್ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಯಕ್ರಮದ ಪೂರ್ವತಯಾರಿ ಕುರಿತು ಮಾಹಿತಿ ಪಡೆದರು.
ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಂದ ಮೇಲೆ ಕಂದಾಯ ಇಲಾಖೆಯಲ್ಲಿ ಕಳೆದ ಹತ್ತಾರು ವರ್ಷಗಳಿಂದ ಪ್ಲಾಟಿಂಗ್ ಸಮಸ್ಯೆ ಯಿಂದ ಬಾಕಿ ಉಳಿದಿರುವ ಆಸ್ತಿಗಳನ್ನು ಉಚಿತವಾಗಿ ಪೋಡಿ ಮುಕ್ತ ಯೋಜನೆ ಮುಖಾಂತರ ತ್ವರಿತವಾಗಿ ಪ್ಲಾಟಿಂಗ್ ನಡೆಸಿ ಸುಳ್ಯದಲ್ಲಿ ಈಗಾಗಲೇ 424 ಪಲಾನುಭವಿಗಳ ಪೈಲು ಗಳು ಸಂಪೂರ್ಣ ಗೊಂಡಿರುತ್ತದೆ. ಈ ಎಲ್ಲಾ ಪಲಾನುಭವಿಗಳು ಮತ್ತು ವಿವಿಧ ಇಲಾಖೆಗಳ ಪಲಾನುಭವಿಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಗಳೂರಿನಲ್ಲಿ ಸೌಲಭ್ಯ ವಿತರಣೆ ಮಾಡಲಿದ್ದಾರೆ.
ಅಧಿಕಾರಿಗಳು ಈ ಕಾರ್ಯಕ್ರಮದ ಸಂಪೂರ್ಣ ಯಶಸ್ಸಿಗೆ ತೊಡಗಿಸಿ ಕೊಂಡಿದ್ದು ಸಕಲ ವ್ಯವಸ್ಥೆ ಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯ ಭವಾನಿಶಂಕರ್ ಕಲ್ಮಡ್ಕ ಜತೆಗಿದ್ದರು.





m

