ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂಎ. ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ.ಎ. ಸಲೀಂ ಅವರು ಇಂದೇ ಅಧಿಕಾರ ವಹಿಸಿಕೊಂಡಿದ್ದಾರೆ. ಡಾ. ಎಂ.ಎ. ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಡಾ. ಎಂ. ಎ ಸಲೀಂ ಅವರು 1966ರ ಜೂನ್ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.




m
