Featured, ಅಂಕಣ, ರಾಜ್ಯ

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಪ್ರಥಮ

ಕೊಡಗು, ಮೇ 24: ಇತ್ತೀಚೆಗೆ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.62.34ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಈ ಬಾರಿ 24 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಕಮಾಲ್ ಮಾಡಿದ್ದಾರೆ. ಇದೇ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದ ವಿದ್ಯಾರ್ಥಿ ಮರು ಮೌಲ್ಯಮಾಪನ ಬಳಿಕ ಕರ್ನಾಟಕಕ್ಕೆ ಪ್ರಥಮ ಸ್ಥಾನ ಬಂದಿದ್ದಾರೆ. ಮಡಿಕೇರಿಯ ತನ್ಮಯಿ ಎಂ. ಎನ್. ರಾಜ್ಯಕ್ಕೆ ಪ್ರಥಮ ಬಂದ ವಿದ್ಯಾರ್ಥಿ.

ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿರುವ ತನ್ಮಯಿ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಎಂ. ಎ. ನಿರಂಜನ್ ಮತ್ತು ಸೌಮ್ಯ ದಂಪತಿ ಪುತ್ರ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಕೀರ್ತಿಗೆ ಪಾತ್ರನಾಗಿದ್ದಾನೆ.

ಕರ್ನಾಟಕ ಶಿಕ್ಷಣ ಪರೀಕ್ಷಾ ಮಂಡಳಿ ಈ ಮುಂಚೆ ಪ್ರಕಟಿಸಿದ್ದ ಫಲಿತಾಂಶದಲ್ಲಿ ವಿದ್ಯಾರ್ಥಿ ತನ್ಮಯಿಗೆ 625ಕ್ಕೆ 622 ಅಂಕ ಪಡೆದುಕೊಂಡಿದ್ದ. ಆದರೆ ತನ್ನ ಅಚಲ ನಂಬಿಕೆಯಿಂದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದ ತನ್ಮಯಿ, ಬಳಿಕ 625ಕ್ಕೆ 625 ಅಂಕ ಗಳಿಸಿದ್ದಾನೆ. ಆ ಮೂಲಕ ಮೊದಲನೇ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ.

m

Related Posts