ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಹಾಗೂ ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಅವರ ಮಾಜಿ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಸಕಲೇಶಪುರದ ಪಿಡಬ್ಲ್ಯೂಡಿ ಕ್ವಾಟರ್ಸ್‌ನಲ್ಲಿ ಆತ್ಮಹತ್ಯೆ ಶರಣಾಗಿದ್ದಾರೆ.
ಶೃತಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ. ತಾಲ್ಲೂಕಿನ, ಕಲ್ಗಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶೃತಿ ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು. ಇಂದು ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರ ಅಸ್ವಸ್ಥಗೊಂಡಿದ ಅವರನ್ನು ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ಶಿಕ್ಷಕಿಯ ಅಂತ್ಯಕ್ರಿಯೆ ಆಲೂರು ತಾಲೂಕಿನ ಗಂಜಿಗೆರೆಯಲ್ಲಿ ಭಾನುವಾರ ನಡೆಯಲಿದೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಶ್ರುತಿ ನಾನು ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದೇನೆ. ನನ್ನ ಗಂಡನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ನನ್ನ ಮಕ್ಕಳನ್ನು ಚೆನ್ನಾಗಿ ಓದಿಸಿ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ.




m
