Featured, ಅಂಕಣ, ಸ್ಥಳೀಯ

ಮಂಗಳೂರು: ರಹೀಂ ಹತ್ಯೆ ಪ್ರಕರಣ – ಮೂವರು ಆರೋಪಿಗಳು ಬಂಧನ

ಮಂಗಳೂರು: ಕರಾವಳಿ ಪ್ರದೇಶದಲ್ಲಿ ಕೊಲೆ ಪ್ರಕರಣಗಳು ಮತ್ತು ಗಲಭೆಯಂತ ಘಟನೆಗಳು ಆತಂಕದ ವಾತಾವರಣ ಸೃಷ್ಟಿಸುತ್ತಿವೆ. ಇತ್ತೀಚೆಗೆ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯಾದ ಕೆಲ ದಿನಗಳಲ್ಲೇ ಮತ್ತೊಂದು ದಾರುಣ ಘಟನೆ ನಡೆದಿದೆ. ಮೇ 27 ರಂದು ರಾತ್ರಿ ಅಬ್ದುಲ್ ರಹೀಂ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಈ ಪ್ರಕರಣದಿಂದ ಮಂಗಳೂರು ಹಾಗೂ ಬಂಟ್ವಾಳ ಪ್ರದೇಶಗಳಲ್ಲಿ ತೀವ್ರ ಅಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರಿಂದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹ ವ್ಯಕ್ತವಾಗಿತ್ತು.

ಪೊಲೀಸರ ಚುರುಕಿನ ತನಿಖೆಯಿಂದ ಇದೀಗ ಮೂರು ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಾದವರು ಬಂಟ್ವಾಳದ ದೀಪಕ್ (21), ಪೃಥ್ವಿರಾಜ್ (21) ಮತ್ತು ಚಿಂತನ್ (19) ಎನ್ನಲಾಗಿದ್ದು, ಕಳ್ಳಿಗೆ ಗ್ರಾಮದ ಕನಪಾಡಿಯಲ್ಲಿ ಅವರನ್ನು ಬಂಧಿಸಲಾಗಿದೆ.

ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ. ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯ ಕಾಪಾಡಲು ಪೊಲೀಸರು ಮತ್ತು ಸ್ಥಳೀಯ ಪ್ರಾಧಿಕಾರಗಳು ಕ್ರಮ ಕೈಗೊಂಡಿದ್ದಾರೆ.

m

Related Posts