Featured, ಇತರೆ, ಸ್ಥಳೀಯ

ಮಂಗಳೂರು ನೂತನ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ದ.ಕ. ಜಿಲ್ಲಾ ಎಸ್ಪಿಯಾಗಿ ಡಾ.ಅರುಣ್ ಕೆ. ನೇಮಕ

ಈ ಹಿಂದೆ ಅತೀ ಸೂಕ್ಷ್ಮ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಆಗಮಿಸಿದ್ದ ಸುಧೀರ್ ಕುಮಾರ್ ರೆಡ್ಡಿ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಗಳಿಂದ ಕಾನೂನ ಸುವ್ಯವಸ್ಥೆಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದಿದ್ದರು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಇತ್ತೀಚಿನ ಸರಣಿ ಕೊಲೆಗಳು ಮತ್ತು ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಭಾರಿ ಮಟ್ಟದ ವರ್ಗಾವಣೆ ನಡೆದಿದೆ. ಈ ಕ್ರಮದ ಭಾಗವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಹುದ್ದೆಯಿಂದ ವಾಪಸ್ ಕರೆಸಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.   ಈ ಹಿಂದೆ ಅತೀ ಸೂಕ್ಷ್ಮ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಆಗಮಿಸಿದ್ದ ಸುಧೀರ್ ಕುಮಾರ್ ರೆಡ್ಡಿ ಜಿಲ್ಲೆಯಲ್ಲಿ ಕಟ್ಟು ನಿಟ್ಟಿನ ಕ್ರಮಗಳಿಂದ ಕಾನೂನ ಸುವ್ಯವಸ್ಥೆಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದಿದ್ದರು.
ಆ‌ರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಅತ್ಯಂತ ಜಟಿಲ ಪ್ರಕರಣವನ್ನು ಭೇದಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಈ ನಡುವೆ ಜಿಲ್ಲೆಯಲ್ಲಿ ಶಾಂತಿ ಭಂಗಕ್ಕೆ ಕಾರಣವಾಗುತ್ತಿದ್ದ ಅಪರಾಧಿಗಳನ್ನು ಗಡಿಪಾರು ಮಾಡು ಪ್ರಕ್ರಿಯೆ ಆರಂಭಿಸಿದ್ದರು.

ದಿನ ದಿಂದ ದಿನಕ್ಕೆ ಕರಾವಳಿ ಯಲ್ಲಿ ಕೋಮು ಸಾಮರಸ್ಯ ಹದಗೆಡುತ್ತ ಬಂದಿದ್ದು ದ್ವೇಷ, ಪ್ರಚೋದನಕಾರಿ ಬಾಷಣ, ಸಾಮಾಜಿಕ ಜಾಲತಾಣದಲ್ಲಿ  ಧರ್ಮ ಧರ್ಮಗಳ ನಡುವೆ ವಿದ್ವೇಶ ಉಂಟುಮಾಡುವಂತಹ, ಪ್ರಚೋದನಕಾರಿ ಸಂದೇಶ, ಇಂತಹ ಗಳನ್ನು ಮಟ್ಟಹಾಕಿ ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಜಾರಿಯಲ್ಲಿ ತೀವ್ರ ಗಮನ ನೀಡಲು ಹೊಸ ಆಯುಕ್ತರಿಂದ ನಿರೀಕ್ಷೆ ಇದೆ.
ಇದೇ ಸಮಯದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿದ್ದ ಡಾ. ಅರುಣ್ ಕೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಎಸ್.ಪಿ.ಯಾಗಿ ವರ್ಗಾಯಿಸಲಾಗಿದ್ದು, ಅವರ ಸ್ಥಾನಕ್ಕೆ ಹರಿರಾಂ ಶಂಕರ್ ಅವರನ್ನು ಉಡುಪಿ ಯ ನೂತನ ಎಸ್.ಪಿ.ಯಾಗಿ ನೇಮಕ ಮಾಡಲಾಗಿದೆ

m

Related Posts