ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜಿನಾಮೆ ನೀಡಿದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಪ್ಪಟ ಕಾಂಗ್ರೆಸಿಗ: ಮಹಮ್ಮದ್ ಕುಂಞ ಗೂನಡ್ಕ
ಸುಳ್ಯ : ದಿನ ದಿಂದ ದಿನಕ್ಕೆ ಕರಾವಳಿ ಯಲ್ಲಿ ಕೋಮು ಸಾಮರಸ್ಯ ಹದಗೆಡುತ್ತ ಬಂದಿದ್ದು. ಕೋಮು ವೈಷಮ್ಯಗಳಿಂದ ಹತ್ಯೆಗೀಡಾದ ಬಂಟ್ವಾಳದ ಅಬ್ದುಲ್ ರಹ್ಮಾನ್ ಸೇರಿದಂತೆ ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಸರಣಿ ಕೋಮು ಹತ್ಯೆಗಳನ್ನು ಮಟ್ಚ ಹಾಕಲು ವಿಫಲರಾದ ಆಡಳಿತ ವ್ಯವಸ್ಥೆಯ ವಿರುದ್ದ ಬೇಸತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಮಹಮ್ಮದ್ ಕುಂಞಿ ಗೂನಡ್ಕ ಇಂದು ಮಂಗಳೂರಿನ ಶಾದಿ ಮಹಲ್ ನಲ್ಲಿ ನಡೆದ ಕಾಂಗ್ರೆಸ್ ಮುಸ್ಲಿಂ ಮುಖಂಡರ ಸಭೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.





m
