ಕರ್ನಾಟಕ ಮುಸ್ಲಿಂ ಜಮಾಅತ್, ಸುನ್ನೀ ಯುವಜನ ಸಂಘ ಹಾಗೂ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಗೂನಡ್ಕ ಶಾಖೆಯ ವತಿಯಿಂದ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತರಾದ ಬಂಟ್ವಾಳದ ಕೊಳ್ತಮಜಲು ಮಸೀದಿಯ ಕಾರ್ಯದರ್ಶಿ ಹಾಗೂ ಎಸ್.ಕೆ.ಎಸ್.ಎಸ್.ಎಫ್. ಸಂಘಟನೆಯ ಕಾರ್ಯಕರ್ತರಾದ ಅಬ್ದುಲ್ ರಹ್ಮಾನ್ ಹತ್ಯೆ ಖಂಡಿಸಿ ಗೂನಡ್ಕದ ಬದ್ರಿಯಾ ಜುಮಾ ಮಸೀದಿಯ ಹಯಾತುಲ್ ಇಸ್ಲಾಂ ಮದ್ರಸದಲ್ಲಿ ಇಂದು ಖಂಡನಾ ನಿರ್ಣಯ ಸಭೆ ಹಾಗೂ ಮೃತರ ಹೆಸರಿನಲ್ಲಿ ತಹ್ಲೀಲ್ ಸಮರ್ಪಣೆ ಜರುಗಿತು.

ಮಸೀದಿಯ ಖತೀಬರಾದ ಬಹು.ಅಬೂಬಕ್ಕರ್ ಸಿದ್ದೀಕ್ ಸಖಾಫಿ ಅಲ್ ಅರ್ಶದಿ, ಸುಳ್ಯ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಮಹಮ್ಮದ್ ಕುಂಞಿ ಗೂನಡ್ಕ, ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರುಗಳಾದ ಪಿ.ಕೆ.ಅಬೂಸಾಲಿ ಗೂನಡ್ಕ ಹಾಗೂ ಶೌವಾದ್ ಗೂನಡ್ಕರವರು ಮಾತನಾಡಿ “ದ.ಕ.ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಉಳಿಯಬೇಕು, ಸರ್ವಧರ್ಮದವರೂ ಒಟ್ಟಾಗಿ ಶಾಂತಿಯಿಂದ ಬಾಳಬೇಕಾದ ವಾತಾವರಣ ನಿರ್ಮಾಣವಾಗಬೇಕು, ಅಮಾಯಕರನ್ನು ಧರ್ಮದ ಹೆಸರಿನಲ್ಲಿ ಕೊಲ್ಲುವ ಹೀನಕೃತ್ಯ ನಿಲ್ಲಬೇಕು, ಪೊಲೀಸ್ ಇಲಾಖೆಯು ಯಾರ ಕೈಗೊಂಬೆಯಾಗಿ ಕೆಲಸ ಮಾಡಬಾರದು, ಕೋಮು ಪ್ರಚೋದನಕಾರಿ ಭಾಷಣ ಮಾಡುವವರು ಯಾರೇ ಆಗಿರಲಿ ಯಾವ ಧರ್ಮದವನೇ ಆಗಿರಲಿ ನಿರ್ದಾಕ್ಷಿಣ್ಯ ಕ್ರಮಕೈಗೊಂಡು, ದ.ಕ.ಜಿಲ್ಲೆಯಲ್ಲಿ ಶಾಂತಿ ಮರುಸ್ಥಾಪನೆಯಾಗಬೇಕೆಂದು” ಆಗ್ರಹಿಸಿದರು.
ಮಸೀದಿಯ ಮುಅಲ್ಲಿಂ ಬಹು.ಸವಾದ್ ಮದನಿ, ಕೆ.ಎಂ.ಜೆ.ಗೂನಡ್ಕ ಯುನಿಟ್ ಅಧ್ಯಕ್ಷರಾದ ಉಮ್ಮರ್ ಪುತ್ರಿ, ಎಸ್.ವೈ.ಎಸ್.ಗೂನಡ್ಕ ಯುನಿಟ್ ಅಧ್ಯಕ್ಷರಾದ ಮುನೀರ್ ಪ್ರಗತಿ, ಎಸ್.ಎಸ್.ಎಫ್.ಗೂನಡ್ಕ ಯುನಿಟ್ ಅಧ್ಯಕ್ಷರಾದ ಉನೈಸ್ ಗೂನಡ್ಕ ಸೇರಿದಂತೆ ಜಮಾಅತ್ ಸಮಿತಿಯ ಪದಾಧಿಕಾರಿಗಳು, ಅಲ್ ಅಮೀನ್ ಸಂಸ್ಥೆಯ ಪದಾಧಿಕಾರಿಗಳು, ಸುನ್ನೀ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಜಮಾಅತಿನ ಸದಸ್ಯರು ಈ ವೇಳೆ ಉಪಸ್ಥಿತರಿದ್ದರು.
ಲತೀಫ್ ಸಖಾಫಿ ಗೂನಡ್ಕರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.




m

