ಇತರೆ, ಸ್ಥಳೀಯ

ಸುಳ್ಯ: ಜೂನಿಯರ್ ಕಾಲೇಜು ಬಳಿ ಬರೆ ಕುಸಿತ, ರಸ್ತೆ ಸಂಪರ್ಕ ಕಡಿತಕೊಳ್ಳುವ ಭೀತಿ

ಸ್ಥಳಕ್ಕೆ ನಗರ ಪಂಚಾಯತ್ ಮುಖ್ಯಾಧಿಕಾರಿ ಭೇಟಿ, ಪರಿಶೀಲನೆ

ಸುಳ್ಯ: ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ಜೂನಿಯರ್ ಕಾಲೇಜು ಬಳಿಯ ಮೂರನೇ ಅಡ್ಡರಸ್ತೆಯಲ್ಲಿ ಬರೆ ಕುಸಿದಿದ್ದು ಸಂಪೂರ್ಣ ರಸ್ತೆಯೇ ಕುಸಿಯುವ ಭೀತಿ ಎದುರಾಗಿದೆ.

ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ದಿ. ಅಬ್ವಾಸ್ ಎಂಬವರ ಮನೆಯ ಹಿಂಬದಿಯಲ್ಲಿರುವ ಬರೆ ನಿಧಾನವಾಗಿ ಕುಸಿಯಲಾರಂಭಿಸಿದೆ. ಇದರಿಂದಾಗಿ ಪಕ್ಕದ ಮುಖ್ಯ ಸಂಪರ್ಕ ರಸ್ತೆಯು ಸಂಪೂರ್ಣವಾಗಿ ಕುಸಿಯುವ ಭೀತಿ ಎದುರಾಗಿದೆ.

ಈ ಕುರಿತು ಸ್ಥಳೀಯರು ದೂರವಾಣಿ ಮೂಲಕ ನಗರ ಪಂಚಾಯತ್’ನ ಮುಖ್ಯಾಧಿಕಾರಿ ಸುಧಾಕರ್ ಅವರನ್ನು ಸಂಪರ್ಕಿಸಿ ಸಮಸ್ಯೆಯ ಕುರಿತು ವಿವರಿಸಿದ್ದಾರೆ. ತಕ್ಷಣವೇ ಮನವಿಗೆ ಸ್ಪಂದಿಸಿದ ಮುಖ್ಯಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಗರ ಪಂಚಾಯತ್ ಸದಸ್ಯರೊಡನೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಚರ್ಚೆ ನಡೆಸಿದರು.

ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ದಿ. ಸಾಬ್ಜಾನ್ ಸಾಹೇಬ್ ಅವರ ಮನೆಯ ಹಿಂಬದಿಯ ಬೃಹತ್ ಕಾಂಪೌಂಡ್ ಭಾಗಶಃ ಕುಸಿದಿದ್ದು, ಸಂಪೂರ್ಣವಾಗಿ ಕುಸಿಯುವ ಭೀತಿ ಎದುರಾಗಿದೆ. ಈ ಸ್ಥಳವನ್ನೂ ಸಹ ಮುಖ್ಯಾಧಿಕಾರಿ ಅವರು ಇದೇ ಸಂದರ್ಭದಲ್ಲಿ ವೀಕ್ಷಿಸಿದರು.

m

Related Posts