ಬೆಂಗಳೂರು, (ಮೇ 31): ಒಂದೆಡೆ ಬೇಸಿಗೆ ರಜೆ (Summer holidays) ಮುಗಿಸಿಕೊಂಡು ವಿದ್ಯಾರ್ಥಿಗಳು(Students) ವಾಪಸ್ ಶಾಲೆಗಳತ್ತ (Schools) ಹೊರಟ್ಟಿದ್ದಾರೆ. ಮತ್ತೊಂದೆಡೆ ಕರ್ನಾಟಕದಲ್ಲಿ ದಿನೇ ದಿನೇ ಕೊವಿಡ್ (Coronavirus) ಆತಂಕ ಹೆಚ್ಚಾಗುತ್ತಿದೆ. ಇದರಿಂದ ಮೊನ್ನೆ ಸಭೆ ನಡೆಸಿದ್ದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ (Karnataka Health Department), ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ(Covid guidelines) ಪ್ರಕಟಿಸಿದೆ.
ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಆರೋಗ್ಯ ಇಲಾಖೆ ಆಯುಕ್ತ ಶಿವಕುಮಾರ್ ಅವರು ಹೊಸ ಗೈಡ್ ಲೈನ್ಸ್ ಪ್ರಕಟಿಸಿ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೋವಿಡ್ ಗುಣಲಕ್ಷಣಗಳು ಕಂಡುಬಂದರೆ ಕೂಡಲೇ ಅವರ ಪೋಷಕರಿಗೆ ತಿಳಿಸಿ ಮನೆಗೆ ಕಳುಹಿಸಬೇಕು. ಅಲ್ಲದೇ ಶಾಲಾ ಸಿಬ್ಬಂದಿಯಲ್ಲಿ ಗುಣಲಕ್ಷಣ ಕಂಡು ಬಂದಲ್ಲಿ ಮುಂಜಾಗೃತ ಕ್ರಮ ಪಾಲಿಸಬೇಕು. ಹಾಗೇ ಶಾಲೆಗಳಲ್ಲಿ ಸ್ವಚ್ಛತೆ, ಹಾಗೂ ಕೋವಿಡ್ ನಿಯಮ ಪಾಲಿಸಬೇಕು ಎಂದು ಮಾರ್ಗಸೂಚಿಯಲ್ಲಿ ಶಾಲೆಗಳಿಗೆ ಸೂಚನೆ ನೀಡಲಾಗಿದೆ.




m
