Featured, ಅಂಕಣ, ಸ್ಥಳೀಯ

ಸುಳ್ಯದಲ್ಲಿ ಪ್ರಗತಿ ಪರಿಶೀಲನಾ ಸಭೆ ಮತ್ತು ಹಕ್ಕು ಪತ್ರ ವಿತರಣೆಗೆ ಉಸ್ತುವಾರಿ ಸಚಿವರಿಗೆ ಸಚಿನ್ ಮನವಿ

ಜೂನ್ ತಿಂಗಳಲ್ಲಿ ದಿನಾಂಕ ನಿಗದಿಗೆ ಸಚಿವರ ಸೂಚನೆ 

ಸುಳ್ಯ ತಾಲೂಕಿನ ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಮತ್ತು ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಹಕ್ಕು ಪತ್ರ, ವಿವಿಧ ಸವಲತ್ತುಗಳ ವಿತರಣೆಯ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ತಂದಾಗ ಜೂನ್ ತಿಂಗಳಲ್ಲಿ ನಡೆಸಲು ದಿನಾಂಕ ನಿಗದಿಗೆ ಸೂಚನೆ ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮಾಜಿ ಜಿಲ್ಲಾಧ್ಯಕ್ಷ ಸಚಿನ್ ರಾಜ್ ಶೆಟ್ಟಿ ತಿಳಿಸಿದ್ದಾರೆ. 

ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕಾರ, ಸ್ಥಳದಲ್ಲೇ ಸಮಸ್ಯೆ ಪರಿಹಾರ ದೊರೆಯಲಿದೆ ಎಂದು ಸಚಿನ್ ತಿಳಿಸಿದ್ದಾರೆ.

m

Related Posts