ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉನೈಸ್ ಪೆರ್ಲಾಪ್ ಹಾಗು ರಿಲ್ಯಾಕ್ಸ್ ಇನ್ ಗ್ರೂಪ್ ಮಾಲಕರಾದ ಹನೀಫ್ ಪೆರ್ಲಾಪ್ ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ಕೋಮುಸಂಘರ್ಷಕ್ಕೆ ಕಾರಣರಾದವರನ್ನು ಬಂಧಿಸಬೇಕೆಂದು ಮನವಿ ಮಾಡಿದರು.
ಮನವಿಯಲ್ಲಿ ಅಮಾಯಕ ಅಬ್ದುಲ್ ರಹಿಮಾನ್ ಕೊಲೆಯ ಹಿಂದೆ ಇರುವ ಎಲ್ಲಾ ಸಂಘಪರಿವಾರದ ನಾಯಕರನ್ನು ಬಂಧಿಸಬೇಕು ಮತ್ತು ಜಿಲ್ಲೆಯಲ್ಲಿ ನಿರಂತರ ಕೊಲೆಗೆ ಪ್ರಮುಖ ಕಾರಣರಾಗುವ ಪ್ರಚೋದನಾಕಾರಿ ಭಾಷಣ ಮಾಡುವವರನ್ನು ಬಂಧಿಸಿ ಜೈಲಿಘಟ್ಟಬೇಕು ಹಾಗೂ ಸರ್ಕಾರದ ವತಿಯಿಂದ ಕನಿಷ್ಠ 50 ಲಕ್ಷ ಪರಿಹಾರ ನೀಡಬೇಕು ಹಾಗು ಎಲ್ಲಾ ಅಪರಾಧಿಗಳಿಗೆ ಕನಿಷ್ಠ 6 ವರ್ಷ ಜೈಲು ಶಿಕ್ಷೆ ಆಗುವಂತೆ ಮಾಡಬೇಕು ಎಂಬ ಮನವಿಯನ್ನು ಮಾಡಿದರು.




m
