ಸರಕಾರದ ಯೋಜನೆಗಳು ಮತ್ತು ಸವಲತ್ತುಗಳನ್ನು ಜನರಿಗೆ ತಲುಪಿಸಲು ಮತ್ತು ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ವ್ಯವಸ್ಥೆ ಒದಗಿಸಲು ರಾಧಾಕೃಷ್ಣ ಬೊಳ್ಳೂರು ಸಲಹೆ
ಸುಳ್ಯ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ, ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜೂ. 11ರಂದು ಸುಳ್ಯ ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಿದರು.
ಕರ್ನಾಟಕ ಸರಕಾರ ಸಮಾಜ ಕಲ್ಯಾಣ ಇಲಾಖೆಗೆ ವಿಶೇಷ ಪ್ರಾತಿನಿಧ್ಯ ನೀಡಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಸರಕಾರದ ಯೋಜನೆಗಳನ್ನು ತಳಮಟ್ಟದ ಜನರಿಗೆ ತಲುಪಿಸಲು ಇಲಾಖೆ ವಿಶೇಷ ಕಾಳಜಿ ವಹಿಸಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಕಾಲೋನಿಗಳ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯ ಒದಗಿಸಲು ಮುತುವರ್ಜಿವಹಿಸಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಬೇಕು. ಸರಕಾರದ ಮಟ್ಟದಲ್ಲಿ ನಾವು ಪ್ರಯತ್ನಿಸುವುದಾಗಿ ರಾಧಾಕೃಷ್ಣ ಬೊಳ್ಳೂರು ಸಲಹೆ ನೀಡಿದರು.
ಶಾಲಾ ಕಾಲೇಜು ಪ್ರಾರಂಭವಾಗಿದ್ದು ಹಾಸ್ಟೆಲ್ ಗಳಲ್ಲಿ ಸ್ವಚ್ಛತೆ ವಹಿಸಿ ಆರೋಗ್ಯದ ಬಗ್ಗೆ ಗಮನ ನೀಡಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಮತ್ತು ಸವಲತ್ತುಗಳನ್ನು ನೀಡಬೇಕು. ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಈ ಸಂದರ್ಭದಲ್ಲಿ ಸಲಹೆ ನೀಡಿದರು.
ಸುಳ್ಯಕ್ಕೆ ಮೊರಾರ್ಜಿ ವಸತಿ ಶಾಲೆಯ ಅಗತ್ಯತೆ ಇದ್ದು ಇದರ ಬಗ್ಗೆ ಪರಾಮರ್ಶೆ ನಡೆಸಿ ಅಗತ್ಯ ದಾಖಲೆಯನ್ನು ತಯಾರಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ನಿಯೋಗದಲ್ಲಿ ಸುಳ್ಯ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಭವಾನಿಶಂಕರ್ ಕಲ್ಮಡ್ಕ, ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಗೋಕುಲ್ ದಾಸ್, ಯುವಕಾಂಗ್ರೇಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಆಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಸತ್ಯಕುಮಾರ್ ಆಡಿಂಜ, ವಿಜಯಕುಮಾರ್ ಆಲೆಟ್ಟಿ ಉಪಸ್ಥಿತರಿದ್ದರು.




m
