ಬೆಳ್ತಂಗಡಿ (ಜೂ-19):ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 17 ನೇ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಜೂನ್ 21 ಶನಿವಾರ ಬೆಳಿಗ್ಗೆ 9:45 ಗಂಟೆಗೆ ಸರಿಯಾಗಿ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ನಡೆಯಲಿದೆ.
ಕಾರ್ಯಕ್ರಮಕ್ಕೆ ಪಕ್ಷದ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು, ಜಿಲ್ಲಾ ಮುಖಂಡರು, ಸಾಮಾಜಿಕ ಹೋರಾಟಗಾರರು, ಪಂಚಾಯತ್ ಸದಸ್ಯರು, ಹಿತೈಷಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ ಎಂದು ಎಸ್‌ಡಿಪಿಐ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ನವಾಝ್ ಕಟ್ಟೆ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




m
