ಬೆಂಗಳೂರು, ಜೂನ್ 19: ರಾಜ್ಯ ಸರ್ಕಾರವು ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಮೀಸಲಾತಿಯನ್ನು ಶೇ.10ರಿಂದ ಶೇ.15ಕ್ಕೆ ಹೆಚ್ಚಿಸಲು ನಿರ್ಧರಿಸಿದೆ. ಈ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜೂನ್ 19) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈ ಪ್ರಸ್ತಾವನೆಯನ್ನು ಮಂಡಿಸಿದ್ದು, ಸಂಪುಟವು ಒಪ್ಪಿಕೊಂಡಿದೆ. ಇದರಿಂದ ಮುಸ್ಲಿಂ ಸೇರಿದಂತೆ ಇತರೆ ಅಲ್ಪಸಂಖ್ಯಾತ ಸಮುದಾಯಗಳು ರಾಜ್ಯದ ವಿವಿಧ ವಸತಿ ಯೋಜನೆಗಳಿಂದ ಹೆಚ್ಚಿನ ಲಾಭ ಪಡೆಯಲಿವೆ.
ಈ ಮೀಸಲಾತಿ ಸೌಲಭ್ಯವು ರಾಜ್ಯಾದ್ಯಂತ ನಗರ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳಿಂದ ಜಾರಿಗೆ ಬರುವ ಎಲ್ಲ ವಸತಿ ಯೋಜನೆಗಳಿಗೆ ಅನ್ವಯಿಸುತ್ತದೆ.
ಸರ್ಕಾರವು ಈಗಾಗಲೇ ಗುತ್ತಿಗೆ ಯೋಜನೆಗಳಲ್ಲಿ ಮೀಸಲಾತಿಯನ್ನು ಜಾರಿಗೆ ತಂದಿದ್ದು, ಇನ್ನು ವಸತಿ ಕ್ಷೇತ್ರದಲ್ಲೂ ಅಲ್ಪಸಂಖ್ಯಾತರಿಗೂ ಹೆಚ್ಚಿನ ಪ್ರತಿನಿಧನೆ ಲಭಿಸುವ ದಾರಿ ತೆರೆಯಲಾಗಿದೆ.







m
