Featured, ಅಂಕಣ, ಸ್ಥಳೀಯ

ಇಂಡಿಯನ್ ರೆಡ್ ಕ್ರಾಸ್ ದ.ಕ. ಜಿಲ್ಲಾ ಘಟಕದಿಂದ ಫಲಾನುಭವಿಗಳಿಗೆ ನಿತ್ಯ ಬಳಕೆಯ ಸಾಮಾಗ್ರಿ ವಿತರಣೆ

ಸುಳ್ಯ: ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅರ್ಹ ಫಲಾನುಭವಿಗಳಿಗೆ ನಿತ್ಯ ಬಳಕೆಯ ಹಾಗೂ ಅಡುಗೆ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಹಿನ್ನೆಲೆಯಲ್ಲಿ ಸುಳ್ಯ ರೆಡ್ ಕ್ರಾಸ್ ಘಟಕದ ಅಧ್ಯಕ್ಷರಾದ ಪಿ. ಬಿ. ಸುಧಾಕರ್ ರೈ ಅವರಿಗೆ ವಿತರಿಸಲು ಈ ವಸ್ತುಗಳನ್ನು ಹಸ್ತಾಂತರಿಸಲಾಯಿತು.

ಈ ಕಾರ್ಯಕ್ರಮವು ಸುಳ್ಯ ವರ್ತಕರ ಸಂಘದ ಸಮುದಾಯ ಭವನದಲ್ಲಿ ಸರಳವಾಗಿ ನಡೆಯಿತು. ಸಮಾರಂಭದಲ್ಲಿ ಜಿಲ್ಲಾ ರೆಡ್ ಕ್ರಾಸ್ ಘಟಕದ ಮುಖ್ಯ ಸಲಹೆಗಾರರು ಹಾಗೂ ರಾಜ್ಯ ಕಾರ್ಯಕಾರಿಣಿ ಪೂರ್ವ ನಿರ್ದೇಶಕರಾದ ಎಸ್. ರವಿ ಅವರು ನಿತ್ಯ ಬಳಕೆಯ ವಸ್ತುಗಳನ್ನು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷರು ಹಾಗೂ ರೆಡ್ ಕ್ರಾಸ್ ಸುಳ್ಯ ಘಟಕದ ಉಪಸಭಾಪತಿಯಾದ ಕೆ. ಎಂ. ಮುಸ್ತಫ, ಮಂಗಳೂರು ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರವೀಣ್, ಸುಳ್ಯ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪ್ರಮೀಳಾ ಹಾಗೂ ರೆಡ್ ಕ್ರಾಸ್ ನಿರ್ದೇಶಕಿ ಪದ್ಮಿನಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

m

Related Posts