ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ದ.ಕ. ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಇಂದು 20-06-2025 ರಂದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಗಮದ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಶ್ರೀ ದರ್ಶನ್ ಹೆಚ್. ವಿ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಸಮಿತಿಯ ಸದಸ್ಯರಾದ ಮಹೇಶ್ ಬೆಳ್ಳಾರ್ಕರ್ ಅವರು ಈ ಸಭೆಯಲ್ಲಿ ಭಾಗವಹಿಸಿ ಅಲೆಮಾರಿ ಸಮುದಾಯದ ಜಾತಿಗಳ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯಗಳ ಪ್ರಮಾಣ ಹಾಗೂ ಆಯ್ಕೆ ಮಾಡುವ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಿ ತಾಲೂಕುವಾರು ಆಯ್ಕೆ ಪ್ರಕ್ರಿಯೆ ನಡೆಸುವಂತೆ ಅಧಿಕಾರಿಗಳ ಗಮನ ಸೆಳೆದು ಮನವಿ ಪತ್ರವನ್ನು ಸಲ್ಲಿಸಿದರು.

ಸಭೆಯಲ್ಲಿ ಪ್ರಮುಖ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಹಾಯಕ ಕಮಿಷನರುಗಳು, ಎಲ್ಲ ತಾಲೂಕುಗಳ ತಾ. ಪಂ. ಕಾರ್ಯನಿರ್ವಹಣಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ನಗರ ಪಂಚಾಯತ್/ನಗರ ಸಭೆಗಳ ಮುಖ್ಯಾಧಿಕಾರಿಗಳು, ಸಮಿತಿಯ ಇತರ ಸದಸ್ಯರು ಉಪಸ್ಥಿತರಿದ್ದರು.







m
