Featured, ಅಂಕಣ, ರಾಜಕೀಯ

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಇಂದು ಬೆಳ್ತಂಗಡಿ, ಪುತ್ತೂರಿನಲ್ಲಿ ಎಸ್ ಡಿ ಪಿ ಐ ವತಿಯಿಂದ ಪ್ರತಿಭಟನೆ

ಪುತ್ತೂರು. ಜೂ 24- ಸರಕಾರಿ ಭೂಮಿಯಲ್ಲಿ ಉಳುಮೆ ಮಾಡುತ್ತಿರುವ ಮುಸ್ಲಿಮರು ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಹೆಸರಿಗೆ ಜಮೀನು ನೋಂದಣಿ ಮಾಡುವಂತೆ ಅಧಿಕಾರಿಗಳಲ್ಲಿ ಕೋರಿದ ಹಿನ್ನಲೆಯಲ್ಲಿ ಈ ಕುರಿತು ರೈತರು ಮಹದೇವಪುರದಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರ ಜೊತೆ ನಡೆದ ಸಭೆಯಲ್ಲಿ, ಮುಸ್ಲಿಮರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಖಾತೆ ಮಾಡಿಕೊಡುತ್ತಿದ್ದಾರೆ ಎಂದು ಆರೋಪಿಸಿದಾಗ, ʼಜಮೀನು ಉಳುವವರು ನನ್ನ ಬಳಿ ಬಂದಿದ್ದರು. ನಾನು ದರ್ಖಾಸ್ತು ಮುಂದಕ್ಕೆ ನೋಡುವ, ಸಧ್ಯಕ್ಕೆ ಏನೂ ಮಾಡುವುದಕ್ಕೆ ಆಗಲ್ಲ ಎಂದು ಹೇಳಿದ್ದೇನೆ. ಸರಕಾರಿ ಭೂಮಿಯನ್ನು ಸಾಬರ(ಮುಸ್ಲಿಮರ) ಹೆಸರಿಗೆ ಮಾಡಿದ್ರೆ, ಅಂತಹವರನ್ನು ನೇಣಿಗೆ ಹಾಕುವುದು ಗ್ಯಾರೆಂಟಿ ಎಂದು ಕಾಂಗ್ರೆಸ್ ಶಾಸಕ ಅಧಿಕಾರಿಗಳಿಗೆ ಬೆದರಿಕೆ ಹಾಕುವ ಮೂಲಕ ಸಂವಿಧಾನಾತ್ಮಕ ಪ್ರಕ್ರಿಯೆಗೆ ಸವಾಲು ಎಸೆದಿದ್ದಾರೆ.

ಇಂತಹ ನಾಲಾಯಕ್ ಶಾಸಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎಸ್ ಡಿ ಪಿ ಐ ರಾಜ್ಯಾಧ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಇದರ ಭಾಗವಾಗಿ ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ಸಂಜೆ 3.30ಕ್ಕೆ ಮತ್ತು ಪುತ್ತೂರು ದರ್ಬೆ, ಜಂಕ್ಷನ್ ಬಳಿ ಇಂದು ಸಂಜೆ 4ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

m

Related Posts