ಜೆಲ್ಲಿ ಚಾಕಲೇಟ್‌ನಲ್ಲಿ ಗಾಂಜಾ ಮಿಶ್ರಣ ಮಾಡಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ವೊಂದನ್ನು ಬೆಂಗಳೂರು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಮುಹಮದ್ ಜಾಹೀದ್ ಹಾಗೂ ಇಸ್ಮಾಯಿಲ್ ಅನ್ನಾನ್. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಜೆಲ್ಲಿ ಚಾಕಲೇಟ್‌ನಲ್ಲಿ ಗಾಂಜಾ ಮಿಶ್ರಣ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಗುರಿಯಾಗಿಟ್ಟುಕೊಂಡು ಇವರು ವ್ಯವಹಾರ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಈ ಕುರಿತು ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಜೆಲ್ಲಿ ಗಾಂಜಾ ಗ್ಯಾಂಗ್ ಅನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬ್ಯಾಟರಾಯನಪುರ ಇನ್ಸ್‌ಪೆಕ್ಟರ್ ಕೆ.ಜೀವನ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ಮಾಡಿದ್ದು, ಒಟ್ಟು ಮೂರು ಲಕ್ಷ ಮೌಲ್ಯದ 1440 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ.
ತನಿಖೆ ವೇಳೆ ಗಾಂಜಾದ ಬಟ್ಟಿ ಇಳಿಸಿರುವ ರಸವನ್ನೇ ಜೆಲ್ಲಿ ಚಾಕಲೇಟ್ ಜೊತೆ ಬೆರೆಸುತ್ತಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಹೆಬ್ಬಾಳದ ವಿಶ್ವನಾಥ ನಾಗೇನಹಳ್ಳಿಯಲ್ಲಿ ಆರೋಪಿಗಳು ವಾಸವಿದ್ದರು. ಮಂಗಳೂರು ಮೂಲದ ಸ್ನೇಹಿತನ ಮೂಲಕ ದಂಧೆ ನಡೆಸುತ್ತಿದ್ದರು ಎಂಬುದು ಗಮನಾರ್ಹ.





m
