“ಸುಳ್ಯ ನಗರದ ಮುಖ್ಯ ರಸ್ತೆಯಲ್ಲಿ ಜಾಗೃತಿ ಫಲಕಗಳೊಂದಿಗೆ ಬೃಹತ್ ಕಾಲ್ನಡಿಗೆ ಜಾಥಾ”
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ಪುತ್ತೂರು ಉಪ ವಿಭಾಗದ ಸುಳ್ಯ ವೃತ್ತ ಕಚೇರಿ ವತಿಯಿಂದ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜೂನ್ 26ರಂದು ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸುಳ್ಯ ನಗರ ಮುಖ್ಯ ರಸ್ತೆಯಲ್ಲಿ ಜಾಗೃತಿ ಫ್ಲೆಕ್ಸ್‌ಗಳೊಂದಿಗೆ ಬೃಹತ್ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದ್ದು, ಸುಳ್ಯ ಜ್ಯೋತಿ ಸರ್ಕಲ್‌ನಿಂದ ಗಾಂಧಿನಗರದವರೆಗೆ ರ್ಯಾಲಿ ನಡೆಯಿತು. ನಿವೃತ್ತ ಪ್ರಾಂಶುಪಾಲ ಪ್ರೊ. ಕೆ.ವಿ. ದಾಮೋಧರ ಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಜಾಥಾದಲ್ಲಿ ಸುಳ್ಯ ವೃತ್ತದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಬೆಳ್ಳಾರೆ, ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಪಾಲ್ಗೊಂಡವರು ಮಾದಕ ದ್ರವ್ಯ ವಿರುದ್ಧ ಜಾಗೃತಿ ಘೋಷಣಾ ಫಲಕಗಳನ್ನು ಹಿಡಿದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಪೊಲೀಸರ ತಂಡ ಶ್ವೇತವರ್ಣದ ಉಡುಪಿನಲ್ಲಿ ಗಮನಸೆಳೆಯಿತು.

ರೋಟರಿ ಕ್ಲಬ್ ಸುಳ್ಯ, ಪ್ರೆಸ್ ಕ್ಲಬ್ ಸುಳ್ಯ, ನಗರ ಪಂಚಾಯತ್, ಕೆವಿಜಿ ಶಿಕ್ಷಣ ಸಂಸ್ಥೆ, ಮತ್ತಿತರ ಸಂಘ ಸಂಸ್ಥೆಗಳ ಸದಸ್ಯರು ಈ ಜಾಥಾದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಬೆಳ್ಳಾರೆ ಎಸ್‌ಐ ಈರಯ್ಯ ದೂಂತೂರು, ಸುಬ್ರಹ್ಮಣ್ಯ ಎಸ್‌ಐ ಕಾರ್ತಿಕ್, ಸುಳ್ಯ ಅಪರಾಧ ವಿಭಾಗದ ಎಸ್‌ಐ ಸರಸ್ವತಿ, ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರ್‌ಬಿದಿರೆ, ಮುಖ್ಯ ಅಧಿಕಾರಿ ಸುಧಾಕರ್ ಎಂ.ಎಚ್., ಪ್ರೆಸ್ ಕ್ಲಬ್ ಗೌರವಾಧ್ಯಕ್ಷ ಹರೀಶ್ ಬಂಟ್ವಾಳ, ಅಧ್ಯಕ್ಷ ಶರೀಫ್ ಜಟ್ಟಿಪಳ್ಳ, ಕೆವಿಜಿ ಸಂಸ್ಥೆಯ ಉಪನ್ಯಾಸಕರು, ಮುಖಂಡರಾದ ಹಮೀದ್ ಕುತ್ತಮೊಟ್ಟೆ, ನಗರ ಪಂಚಾಯತ್ ಸದಸ್ಯರುಗಳಾದ ಎಂ.ವೆಂಕಪ್ಪ ಗೌಡ, ಕೆ.ಎಸ್. ಉಮ್ಮರ್, ಸಾಮಾಜಿಕ ಕಾರ್ಯಕರ್ತ ಡಿ.ಎಮ್. ಶಾರಿಕ್, ಕುಸುಮಾಧರ ಕೆ.ಟಿ., ಎಂ.ಚೆನ್ನಕೇಶವ ಜಾಲ್ಲೂರು ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಸುಳ್ಯ ಎಸ್‌ಐ ಸಂತೋಷ್ ಸ್ವಾಗತಿಸಿ, ವಂದಿಸಿದರು.




m
